Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.30: ಜೋಕಟ್ಟೆಯಲ್ಲಿ ಉಚಿತ ಸಾಮೂಹಿಕ...

ಜು.30: ಜೋಕಟ್ಟೆಯಲ್ಲಿ ಉಚಿತ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ24 July 2017 8:49 PM IST
share
ಜು.30: ಜೋಕಟ್ಟೆಯಲ್ಲಿ ಉಚಿತ ಸಾಮೂಹಿಕ ವಿವಾಹ

ಮಂಗಳೂರು, ಜು. 24: ಜೋಕಟ್ಟೆ ಏರಿಯಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ (ಜೆಎಎಂಡಬ್ಲುಎ) ಗಲ್ಫ್ ಘಟಕ ಮತ್ತು ಅಂಜುಮಾನ್ ಖುವ್ವತುಲ್ ಇಸ್ಲಾಂ ಜೋಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಐದು ಬಡ ಹೆಣ್ಣು ಮಕ್ಕಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಜು.30ರಂದು ಬೆಳಗ್ಗೆ 9:30ಕ್ಕೆ ಜೋಕಟ್ಟೆಯ ಅಂಜುಮಾನ್ ಶಾಲಾ ವಠಾರದಲ್ಲಿ ಜರಗಲಿದೆ ಎಂದು ಜಾಮ್ವಾದ ದಮಾಂ - ಜುಬೈಲ್ ಘಟಕದ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಿಳಿಸಿದ್ದಾರೆ.

ಸಮಸ್ತ ಮುಶಾವರದ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ದುವಾ ನೆರವೇರಿಸಲಿದ್ದಾರೆ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್‌ ನೇತೃತ್ವವನ್ನು ವಹಿಸಲಿದ್ದಾರೆ. ಜಾಮ್ವಾದ ಗೌರವಾಧ್ಯಕ್ಷ ಬಿ.ಝಕರಿಯ್ಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಅಂಜುಮಾನ್‌ನ ಅಧ್ಯಕ್ಷ ಬಿ.ಎ.ರಶೀದ್, ಜೋಕಟ್ಟೆಯ ಮುಹಿಯುದ್ದೀನ್ ಹಳೆ ಜುಮಾ ಮಸೀದಿಯ ಖತೀಬ್ ಇಸ್ಹಾಖ್ ಫೈಝಿ, ಜೋಕಟ್ಟೆಯ ಮುಹಿಯುದ್ದೀನ್ ಹೊಸ ಜುಮಾ ಮಸೀದಿಯ ಖತೀಬ್ ಇ.ಎಂ.ಅಬ್ದುರ್ರಹ್ಮಾನ್ ದಾರಿಮಿ ಅಲ್ ಹಾಮಿದಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಜಾಮ್ವಾ ಇದು ಜೋಕಟ್ಟೆ ಆಸುಪಾಸಿನ ಬಡ ಮತ್ತು ನಿರ್ಗತಿಕರ ಪಾಲಿನ ಆಶಾಕಿರಣ. 2004 ರಲ್ಲಿ ಜೋಕಟ್ಟೆಯ ಅನಿವಾಸಿ ಸಮಾನಮನಸ್ಕರಿಂದ ಬಡಜನರ ಸಾಂತ್ವನಕ್ಕಾಗಿ ಅವರ ಆರ್ಥಿಕ, ಶೈಕ್ಷಣಿಕ ಮತ್ತು ವೈದ್ಯಕೀಯ ನೆರವಿನ ಗುರಿಯೊಂದಿಗೆ ಮತ್ತು ಊರಿನ ಶ್ರೇಯಾಭಿವೃದ್ಧಿಗಾಗಿ ಸ್ಥಾಪಿಸಲ್ಪಟ್ಟ ಜೆಎಎಂಡಬ್ಲುಎ ಇಂದು ಗಲ್ಫ್ ರಾಷ್ಟ್ರಗಳಲ್ಲಿರುವ ಜೋಕಟ್ಟೆಯ ಅನಿವಾಸಿಗಳ ಸ್ವಾರ್ಥ ರಹಿತ ಸೇವೆಯಿಂದಾಗಿ ಯಶಸ್ಸಿನ 12 ವರ್ಷಗಳನ್ನು ಪೂರ್ತಿಗೊಳಿಸಿ 13ನೆ ವರ್ಷಕ್ಕೆ ಕಾಲಿಡುತ್ತಿದೆ.

ಜಾಮ್ವಾದ ಗೌರವಾಧ್ಯಕ್ಷರಾಗಿರುವ ಮುಝೈನ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾಗಿರುವ ಝಕರಿಯ್ಯೆ ಜೋಕಟ್ಟೆ ಅವರು ಜಾಮ್ವಾದ ಕಾರ್ಯಗಳಲ್ಲಿ ನಿರಂತರ ಮಾರ್ಗದರ್ಶನಗೈಯ್ಯುತ್ತಿದ್ದು, ಸಂಘದ ದ್ಯೇಯೋದ್ದೇಶಗಳ ಗುರಿ ಸಾಧನೆಗೆ ಇತರ ಸದಸ್ಯರೊಂದಿಗೆ ಸೇರಿಕೊಂಡು ಶ್ರಮಿಸುತ್ತಿದ್ದಾರೆ. ಕಳೆದ ಬಾರಿ ಜೋಕಟ್ಟೆ ಆಸುಪಾಸಿನ ಪರಿಸರದ ಐದು ಬಡ ಹೆಣ್ಣುಮಕ್ಕಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡುವ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿತ್ತು. ಅಂಜುಮಾನ್ ಖುವ್ವತುಲ್ ಇಸ್ಲಾಂ ಸಂಸ್ಥೆಯು ಇವರೊಂದಿಗೆ ಸಂಪೂರ್ಣವಾಗಿ ಕೈಜೋಡಿಸಿದೆ ಎಂದು ಅಬ್ದುಲ್ ರಹ್ಮಾನ್ ಮತ್ತು ಅಂಜುಮಾನ್ ಸಂಸ್ಥೆಯ ಅಧ್ಯಕ್ಷ ಬಿ.ಎ.ರಶೀದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಮ್ವಾದ ಈವರೆಗಿನ ಸಾಮಾಜಿಕ ಸೇವೆ 2016 ರಲ್ಲಿ ಜೋಕಟ್ಟೆ ಆಸುಪಾಸಿನ ಐದು ಬಡ ಹೆಣ್ಣುಮಕ್ಕಳ ಉಚಿತ ಸಾಮೂಹಿಕ ಮದುವೆ ನಿರ್ವಹಣೆ. ಅಂಜುಮಾನ್ ಶೈಕ್ಷಣಿಕ ಸಂಸ್ಥೆಗೆ ಜಮೀನು ಖರೀದಿಗೆ ಸುಮಾರು 30 ಲಕ್ಷ ಧನ ಸಹಾಯ. 8ರಿಂದ 12ನೆಯ ತರಗತಿಯ ವಿದ್ಯಾರ್ಥಿಗಳಿಗೆ ರೂ 2,50,000 ವಾರ್ಷಿಕ ವಿದ್ಯಾರ್ಥಿ ವೇತನ. ಬಡ ಹೆಣ್ಮಕ್ಕಳ ವಿವಾಹಕ್ಕೆ 50,000 ರೂ. ನೆರವು. ಸುಮಾರು 25 ಬಡ ಕುಟುಂಬಗಳಿಗೆ ಸುಮಾರು 12.5 ಲಕ್ಷ ರೂ. ವಿತರಣೆ. ವಾರ್ಷಿಕ ಕನಿಷ್ಠ 20 ಬಡ ಕುಟುಂಬಗಳಿಗೆ ತಲಾ 1000 ರೂ. ಮೌಲ್ಯದ ಮಾಸಿಕ ಪಡಿತರ ವಿತರಣೆ. ವಾರ್ಷಿಕ ಕನಿಷ್ಠ 200 ಕುಟುಂಬಗಳಿಗೆ ತಲಾ 3000 ರೂ. ಮೌಲ್ಯದ ರಮಝಾನ್ ಕಿಟ್ ವಿತರಣೆ. ವಾರ್ಷಿಕ ಕನಿಷ್ಠ 400 ಕುಟುಂಬಗಳಿಗೆ ವೈದ್ಯಕೀಯ ಶಿಬಿರಗಳನ್ನು ನಡೆಸುವ ವ್ಯವಸ್ಥೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X