Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಕ್ಕೆ ಕೆಟ್ಟ ಹೆಸರು ತರಲು...

ಸರಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿಯಿಂದ ಕೋಮುದ್ವೇಷ: ದಿನೇಶ್ ಗುಂಡೂರಾವ್ ಆರೋಪ

ವಾರ್ತಾಭಾರತಿವಾರ್ತಾಭಾರತಿ24 July 2017 8:55 PM IST
share
ಸರಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿಯಿಂದ ಕೋಮುದ್ವೇಷ: ದಿನೇಶ್ ಗುಂಡೂರಾವ್ ಆರೋಪ

ಬೆಂಗಳೂರು, ಜು. 24: ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಿದ್ದು, ಅದರ ಭಾಗವಾಗಿ ಕೋಮುವಾದದ ವಿಷಬೀಜ ಬಿತ್ತುವ ಕೆಲಸಕ್ಕೆ ಮುಂದಾಗಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಆರೋಪಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ವಿರುದ್ಧ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಬಿಜೆಪಿ ಮುಖಂಡರು ಸುಳ್ಳು ಆರೋಪ ಮಾಡುತ್ತಿದ್ದು, ಸಚಿವರ ಮೇಲೆ ಐಟಿ ದಾಳಿ, ಜೈಲಿಗೆ ಹೋಗುತ್ತಾರೆ ಅಂತ ಹೇಳುತ್ತಿದ್ದರು. ಆದರೆ, ಅದು ನಡೆಯಲಿಲ್ಲ. ಆದರೆ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮುಗಲಭೆ ಮುಂದಿಟ್ಟುಕೊಂಡು ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದರೂ, ಅದು ಸಾಧ್ಯವಾಗಲಿಲ್ಲ. ಜನ ಸಾಮಾನ್ಯರಿಗೆ ಬಿಜೆಪಿ ಸಂಚು ಏನೆಂದು ಗೊತ್ತಾಗಿದೆ. ಹೀಗಾಗಿ ಶೋಭಾ ಕರಂದ್ಲಾಜೆ, ರಾಜನಾಥ್ ಸಿಂಗ್‌ಗೆ ಪತ್ರ ಬರೆದು ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆಂದು ಟೀಕಿಸಿದರು.

ರಾಜ್ಯದಲ್ಲಿ ಹಿಂದೂಗಳ ಹತ್ಯೆ ಮಾಡಲಾಗುತ್ತಿದೆ. ಜಿಹಾದಿ ಸಂಸ್ಕೃತಿ ತರಲಾಗುತ್ತಿದೆ ಎಂದು ಆರೋಪಿಸುತ್ತಿದ್ದ ಶೋಭಾ ಕರಂದ್ಲಾಜೆ, ಇದೀಗ ಜೀವಂತ ವ್ಯಕ್ತಿಯನ್ನು ಮೃತಪಟ್ಟಿದ್ದಾರೆಂದು ರಾಜನಾಥ್ ಸಿಂಗ್‌ಗೆ ಬರೆದ ಪತ್ರದಲ್ಲಿ ಸೇರಿದ್ದಾರೆ. ಕೋಮು ಗಲಭೆಯಲ್ಲಿ ಕೇವಲ ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಪಟ್ಟಿ ನೀಡಿದ್ದಾರೆ. ಆದರೆ, ಅಲ್ಲಿ ಅಲ್ಪಸಂಖ್ಯಾತರ ಹೆಸರು ಪ್ರಸ್ತಾಪಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ದಕ್ಷಿಣ ಕನ್ನಡದಲ್ಲಿ ರಾಷ್ಟ್ರೀಯ ತನಿಖೆ ದಳ(ಎನ್‌ಐಎ) ಕೇಂದ್ರ ಪ್ರಾರಂಭಿಸುವ ಅಗತ್ಯವಿಲ್ಲ. ಕೋಮು ಸಂಘರ್ಷದಿಂದ ಪ್ರಕ್ಷುಬ್ಧಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಅಲ್ಲಿನ ಸ್ಥಳೀಯ ಪೊಲೀಸರೇ ಪರಿಸ್ಥಿತಿ ನಿಭಾಯಿಸಲಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

ನಮ್ಮ ಪಾತ್ರವಿಲ್ಲ: ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತೀಯ ಸಂಬಂಧವಿಲ್ಲ. ಮಾನ್ಯತೆ ಸಂಬಂಧ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ ಎಂದು ದಿನೇಶ್ ಸ್ಪಷ್ಟಣೆ ನೀಡಿದರು.

ಕ್ರಮ ಕೈಗೊಂಡರೆ ಎಲ್ಲ ಸರಿಯಾಗಲಿದೆ

2007ರಿಂದ ಈವರೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 279 ಹತ್ಯೆಗಳಾಗಿವೆ. ಆ ಪೈಕಿ ಶೇ.70ರಷ್ಟು ಪ್ರಕರಣಗಳು ಪ್ರಸಕ್ತ ವರ್ಷದಲ್ಲಿ ನಡೆದಿದ್ದು, ಅದು ಜಿಲ್ಲೆಯ ಕಲ್ಲಡ್ಕ ವ್ಯಾಪ್ತಿಯಲ್ಲೆ ನಡೆದಿವೆ. ಪ್ರಧಾನಿ ಮೋದಿಯವರು ಮೊದಲು ಶೋಭಾ, ನಳೀನ್ ಕುಮಾರ್ ಕಟೀಲ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮ ಕೈಗೊಂಡರೆ ಎಲ್ಲವೂ ಸರಿಯಾಗಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X