Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಶೋಧಕನಿಗೆ ಶಿಶು ಸಹಜ ಕುತೂಹಲವಿರಬೇಕು:...

ಸಂಶೋಧಕನಿಗೆ ಶಿಶು ಸಹಜ ಕುತೂಹಲವಿರಬೇಕು: ಡಾ. ತಾಳ್ತಜೆ

ವಿವೇಕಾನಂದದಲ್ಲಿ ಕಲಾ ವಿದ್ಯಾಥಿಗಳಿಗೆ ಸಂಶೋಧನಾ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ24 July 2017 10:40 PM IST
share
ಸಂಶೋಧಕನಿಗೆ ಶಿಶು ಸಹಜ ಕುತೂಹಲವಿರಬೇಕು: ಡಾ. ತಾಳ್ತಜೆ

ಪುತ್ತೂರು, ಜು.24: ಮಗು ಪ್ರಶ್ನೆಗಳ ಮೂಲಕ ತನ್ನ ಕುತೂಹಲಗಳನ್ನು ತಣಿಸಿಕೊಳ್ಳುತ್ತದೆ. ಬೆಳೆಯುತ್ತಾ ಹೋದಂತೆ ಈ ಸ್ವಭಾವ ಕಡಿಮೆಯಾಗುತ್ತಾ ಹೋಗುತ್ತದೆ. ಸಂಶೋಧಕನಾದವನಿಗೆ ಶಿಶು ಸಹಜ ಕುತೂಹಲವಿರಬೇಕು. ಅದರಿಂದ ವಿಷಯಗಳ ಬಗೆಗೆ ನಮಗೆ ಮೂಡುವ ಆಸಕ್ತಿ ನಮ್ಮನ್ನು ಸಂಶೋಧನಾ ಕಾರ್ಯಕ್ಕೆ ಪ್ರೇರೇಪಿಸುತ್ತದೆ ಎಂದು ಸಾಹಿತಿ, ಸಂಶೋಧಕ ಡಾ. ತಾಳ್ತಜೆ ವಸಂತ ಕುಮಾರ್ ಹೇಳಿದರು.

ಅವರು ಸೋಮವಾರ ಪುತ್ತೂರಿನ ವಿವೇಕಾನಂದ ಕಾಲೇಜಿನ ಸಂಶೋಧನಾ ಮಾರ್ಗದರ್ಶನ ಕೇಂದ್ರ, ಇತಿಹಾಸ ಸಂಸೃತಿ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಹಾಗೂ ಕನ್ನಡ ಸಂಘ ಜಂಟಿಯಾಗಿ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ’ಮಾನವಿಕ ವಿಭಾಗ - ಸಂಶೋಧನಾ ಅವಕಾಶ’ ಮಾಹಿತಿ ಕಾರ್ಯಾಗಾರಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಸಂಶೋಧನೆ ಎಂದರೆ ಹೊಸದನ್ನು ಹುಡುಕುವುದು. ಒಂದು ವಿಷಯವನ್ನು ಅರ್ಥೈಸಿಕೊಳ್ಳಲು ಅನೇಕ ದೃಷ್ಟಿಕೋನಗಳಿರುತ್ತವೆ. ಆದುದರಿಂದ ಸಂಶೋಧಕನಿಗೆ ಅವಕಾಶಗಳು ಹೇರಳವಾಗಿವೆ. ಆದರೆ ವಿಷಯವನ್ನು ಆರಿಸಿಕೊಳ್ಳುವ ಜಾಣ್ಮೆ ನಮಗಿರಬೇಕು. ನಾವು ವಿಷಯಗಳನ್ನು ಸಂಗ್ರಹಿಸಲು ಸದಾ ಸಿದ್ಧರಾಗಿರಬೇಕು. ಯೋಚನೆಗಳಿಗೆ ತರೆದುಕೊಳ್ಳಲು ಮನೋಭೂಮಿಕೆ ಸನ್ನಧ್ಧವಾಗಿರಬೇಕು ಎಂದು ಹೇಳಿದರು.

ಅಭ್ಯಾಸ ಪ್ರಬಂಧಗಳು ಸಂಶೋಧನೆಯ ಮೆಟ್ಟಿಲು. ಕೇವಲ ಮಾಹಿತಿ ಸಂಗ್ರಹಣೆ ಸಂಶೋಧನೆಯಾಗಲಾರದು. ವಿದ್ಯಾರ್ಥಿಗಳು ತೆರೆದ ಕಣ್ಣುಗಳುಳ್ಳವರಾಗಿರಬೇಕು. ವಿಷಯಗಳ ಗ್ರಹಿಸುವಿಕೆ, ಪರಾಮರ್ಶೆಗಳು ಮನಹೊಕ್ಕಾಗ ಹೊಸ ಸೃಷ್ಟಿ ನಮ್ಮಿಂದ ಸಾಧ್ಯ. ನಮ್ಮ ದಿನನಿತ್ಯದ ಅದೆಷ್ಟೋ ಆಚರಣೆ, ನಡವಳಿಕೆಗಳೇ ನಮಗೆ ಸಂಶೋಧನೆಗೆ ಬೇಕಾದ ಮೂಲಧಾತುವನ್ನು ನೀಡಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಸಂಶೋಧನೆ ಎಂದರೆ ಅಂತರ್ಜಾಲದಿಂದ ಪಡೆದ ಮಾಹಿತಿಯ ನಕಲಲ್ಲ. ಅದು ಒಂದು ಮಾಹಿತಿ ಸಂಗ್ರಹಣೆಯ ದಾರಿ. ವಿದ್ಯಾರ್ಥಿ ಜೀವನದಲ್ಲಿ ಮಾಡುವ ಸಂಶೋಧನಾ ಪ್ರಬಂಧಗಳು ಭವಿಷ್ಯದಲ್ಲಿ ಸಹಾಯಕ್ಕೆ ಬರುತ್ತವೆ. ಆ ಕಾರ್ಯಯೋಜನೆಗಳಿಗಾಗಿ ಕಲಿಯುವ ಮಾಹಿತಿ ಸಂಗ್ರಹಣಾ ವಿಧಾನ, ಶೈಲಿ, ರಚನೆಗಳು ಸಂಶೋಧಕನಿಗಿರಬೇಕಾದ ಗುಣ ಹಾಗೂ ದೃಷ್ಟಿಕೋನವನ್ನು ಬೆಳೆಸುತ್ತದೆ ಎಂದರು.

 ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ವಿವೇಕಾನಂದ ಕಾಲೇಜು ಸಂಶೋಧನಾ ಮಾರ್ಗದರ್ಶನ ಕೇಂದ್ರದ ಸಂಚಾಲಕ ಡಾ. ಹೆಚ್.ಜಿ. ಶ್ರೀಧರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X