Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಉಡುಪಿಯಿಂದ ಬಾಹ್ಯಾಕಾಶದೆತ್ತರಕ್ಕೆ ಬೆಳೆದ...

ಉಡುಪಿಯಿಂದ ಬಾಹ್ಯಾಕಾಶದೆತ್ತರಕ್ಕೆ ಬೆಳೆದ ಪ್ರತಿಭೆ ಯು.ಆರ್.ರಾವ್

ಬಿ.ಬಿ.ಶೆಟ್ಟಿಗಾರ್ಬಿ.ಬಿ.ಶೆಟ್ಟಿಗಾರ್25 July 2017 12:12 AM IST
share
ಉಡುಪಿಯಿಂದ ಬಾಹ್ಯಾಕಾಶದೆತ್ತರಕ್ಕೆ ಬೆಳೆದ ಪ್ರತಿಭೆ ಯು.ಆರ್.ರಾವ್

ದೇಶದ ಖ್ಯಾತನಾಮ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ಅಧ್ಯಕ್ಷ ಪ್ರೊ.ಯು.ಆರ್.ರಾವ್ ಉಡುಪಿಯ ಪುಟ್ಟ ಹಳ್ಳಿ ಅದಮಾರಿನಿಂದ ತನ್ನ ಸತತ ಪರಿಶ್ರಮದ ಮೂಲಕವೇ ಬಾಹ್ಯಾಕಾಶದೆತ್ತರಕ್ಕೆ ಬೆಳೆದು ನಿಂತ ಪ್ರತಿಭೆ.

ಎಡನೀರು ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಕೃಷ್ಣವೇಣಿ ದಂಪತಿಗಳ ಹಿರಿಯ ಮಗನಾಗಿ ಅದಮಾರಿನ ಅಜ್ಜನ ಮನೆಯಲ್ಲಿ 1930ರ ಮಾ.10ರಂದು ಜನಿಸಿದ ರಾಮಚಂದ್ರ ರಾವ್ ಅವರು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೂಡ ಅದಮಾರಿನ ಹಿಂದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡೆದರು. ಮುಂದೆ ಅವರ ಪ್ರೌಢಶಿಕ್ಷಣ ನಡೆದುದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್‌ನಲ್ಲಿ. ಅಡುಗೆ ವೃತ್ತಿಯ ತಂದೆ ಉಡುಪಿ ಮೂಡನಿಡಂಬೂರು ಗ್ರಾಮದಲ್ಲಿ ಮನೆ ಮಾಡಿದ್ದರು.

1944ರಲ್ಲಿ ಲಕ್ಷ್ಮೀನಾರಾಯಣ ಆಚಾರ್ಯರು ಈ ಮನೆಯನ್ನು ಮಾರಿ ಕೊರಂಗ್ರಪಾಡಿಯಲ್ಲಿ ಕೃಷಿ ಭೂಮಿ ಖರೀದಿಸಿ ಮನೆ ನಿರ್ಮಿಸಿ ಅಲ್ಲೇ ವಾಸವಾಗಿದ್ದರು. ಮುಂದೆ ಯು.ಆರ್.ರಾವ್ ಅವರ ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ಕುಟುಂಬ ಬಳ್ಳಾರಿಗೆ ತೆರಳಿದ್ದು, ಅವರ ಕಾಲೇಜು ವಿದ್ಯಾಭ್ಯಾಸ ನಡೆದಿದ್ದು ಅಲ್ಲೇ. ಅಲ್ಲಿಂದ ಕಾಶಿಯ ಬನಾರಸ್ ಹಿಂದು ವಿವಿಯಲ್ಲಿ ಸ್ನಾತಕೋತ್ತರ, ಗುಜರಾತ್ ವಿವಿಯಿಂದ ಡಾಕ್ಟರೇಟ್ ಪದವಿ ಪಡೆದು ಅಮೆರಿಕಕ್ಕೆ ತೆರಳಿ ಅಲ್ಲಿ ಎಂಐಟಿಯಲ್ಲೂ ಕಲಿತು ಬಾಹ್ಯಾಕಾಶ ವಿಜ್ಞಾನಿಯಾಗಿ ದೇಶಕ್ಕೆ ಮರಳಿ ತನ್ನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು ಈಗ ಇತಿಹಾಸ.

ಪ್ರೊ.ಯು.ಆರ್.ರಾವ್ ಹುಟ್ಟಿದ ಹಾಗೂ ಪ್ರಾಥಮಿಕ ಶಿಕ್ಷಣ ಪಡೆದ ಅದಮಾರಿನ ಅವರ ಅಜ್ಜನ ಮನೆಯಲ್ಲಿ ಇಂದು ಉಳಿದಿರುವುದು ಮನೆಯ ಬಾವಿ ಕಟ್ಟೆ ಹಾಗೂ ತುಳಸಿ ಕಟ್ಟೆ ಮಾತ್ರ.

ಹೈಸ್ಕೂಲ್‌ವರೆಗಿನ ಶಿಕ್ಷಣದ ಬಳಿಕ ಯು.ಆರ್.ರಾವ್ ಅವರ ಉಡುಪಿ ನೆಂಟು ಹೆಚ್ಚು ಗಾಢವಾಗಿ ಮುಂದುವರಿಯಲಿಲ್ಲ. ‘ಯು.ಆರ್.ರಾವ್ ಅವರ ತಂದೆ ಮೂಡನಿಡಂಬೂರಿನ ಜಾಗವನ್ನು ನನ್ನ ತಂದೆಗೆ ಮಾರಿ ಕೊರಂಗ್ರಪಾಡಿಯಲ್ಲಿ ಸ್ವಂತ ಮನೆ, ಜಾಗ ಮಾಡಿದರು. ಮುಂದೆ ಅಲ್ಲಿ ಅವರು ಕೃಷಿಕರಾಗಿ ಬದುಕಿದ್ದರು. 1978ರಲ್ಲಿ ತಂದೆ, ಮುಂದಿನ ವರ್ಷ ತಾಯಿ ತೀರಿಕೊಂಡಾಗ ಯು.ಆರ್.ರಾವ್ ಇಲ್ಲಿಗೆ ಬಂದಿದ್ದರು. ಅವರ ಕೊರಂಗ್ರಪಾಡಿ ಮನೆ ಈಗಲೂ ಇದ್ದು ಆದರೆ ಅದನ್ನು ಮಾರಾಟ ಮಾಡಲಾಗಿದೆ.’ ಎಂದು ಪ್ರೊ.ರಾವ್ ಕುರಿತು ತಿಳಿದಿರುವ ಅವರ ನಿಕಟ ಸಂಬಂಧಿ, ಕಮ್ಯುನಿಸ್ಟ್ ನಾಯಕ ಅದಮಾರು ಶ್ರೀಪತಿ ಆಚಾರ್ಯ ತಿಳಿಸಿದರು.

ಪ್ರೊ.ಯು.ಆರ್.ರಾವ್‌ಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಅವರಲ್ಲಿ ಒಬ್ಬರು ನಾಡಿನ ಖ್ಯಾತ ಆರ್ಥಿಕತಜ್ಞ ಡಾ.ಗೋವಿಂದರಾವ್. ಇನ್ನೊಬ್ಬರು ಕೃಷ್ಣಮೂರ್ತಿ ರಾವ್. ಕೃಷ್ಣಮೂರ್ತಿ ರಾವ್ ಉಡುಪಿಯಲ್ಲೆ ವಾಸವಾಗಿದ್ದರು ಎಂದವರು ವಿವರಿಸಿದರು.

ಪ್ರೊ.ರಾವ್ 2014ರಲ್ಲಿ ಸಂಸ್ಥಾಪಕರ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಲು ಮಣಿಪಾಲಕ್ಕೆ ಆಗಮಿಸಿ, ಬಾಹ್ಯಾಕಾಶ ವಿಜ್ಞಾನ, ಮಂಗಳಯಾನ, ಅದಕ್ಕಿರುವ ಅವಕಾಶಗಳ ಕುರಿತು ಉಪನ್ಯಾಸ ನೀಡಿದ್ದರು. ಮತ್ತೊಮ್ಮೆ 2015ರ ಜನವರಿ ಎರಡನೆ ವಾರ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು. ವಿಜ್ಞಾನ ಮತ್ತು ತಂತ್ರಜ್ಞಾನ ಮಾತ್ರ ಈ ದೇಶವನ್ನು ರಕ್ಷಿಸಬಹುದಲ್ಲದೇ ಉಳಿದ ಯಾವುದೂ ಅಲ್ಲ. ಆದುದರಿಂದ ವಿಜ್ಞಾನವನ್ನು ಆಳವಾಗಿ ಅಭ್ಯಸಿಸಿ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ, ಯುವ ಸಮುದಾಯಕ್ಕೆ ಕರೆ ನೀಡಿದ್ದರು.

share
ಬಿ.ಬಿ.ಶೆಟ್ಟಿಗಾರ್
ಬಿ.ಬಿ.ಶೆಟ್ಟಿಗಾರ್
Next Story
X