ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

ಕಾಸರಗೋಡು, ಜು. 25: ವಿದಾರ್ಥಿಗಳನ್ನು ಕೇಂದ್ರೀಕರಿಸಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನೀರ್ಚಾಲ್ ಚೌಕಿಯ ಫರ್ ಮಿಷಾನ್ (22) ಮತ್ತು ಉಳಿಯತ್ತಡ್ಕ ಬದರ್ ನಗರದ ಆಹಮ್ಮದ್ ಮುಸಮ್ಮಿಲ್ ( 20) ಎಂದು ಗುರುತಿಸಲಾಗಿದೆ. ಇವರಿಂದ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಬದರ್ ನಗರ ಸಮೀಪ ಅಲೆದಾಡುತ್ತಿದ್ದ ಇವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಿಸಿದಾಗ ಗಾಂಜಾ ಪತ್ತೆಯಾಗಿದೆ. ಯುವಕರು ಮತ್ತು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





