Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನರೋಡಾ ಪಾಟಿಯಾ:ಪೆರೋಲ್‌ನಲ್ಲಿ ತೆರಳಿ...

ನರೋಡಾ ಪಾಟಿಯಾ:ಪೆರೋಲ್‌ನಲ್ಲಿ ತೆರಳಿ ತಲೆಮರೆಸಿಕೊಂಡಿದ್ದ ದೋಷಿಗಳಿಬ್ಬರ ಸೆರೆ

ವಾರ್ತಾಭಾರತಿವಾರ್ತಾಭಾರತಿ25 July 2017 6:17 PM IST
share
ನರೋಡಾ ಪಾಟಿಯಾ:ಪೆರೋಲ್‌ನಲ್ಲಿ ತೆರಳಿ ತಲೆಮರೆಸಿಕೊಂಡಿದ್ದ ದೋಷಿಗಳಿಬ್ಬರ ಸೆರೆ

ಅಹ್ಮದಾಬಾದ್,ಜು.25: ಪೆರೋಲ್ ಪಡೆದುಕೊಂಡು ಬಳಿಕ ಜೈಲಿಗೆ ಮರಳದೆ ತಲೆಮರೆಸಿಕೊಂಡಿದ್ದ 2002ರ ನರೋಡಾ ಪಾಟಿಯಾ ಹತ್ಯಾಕಾಂಡ ಪ್ರಕರಣದ ಅಪರಾಧಿಗಳಿಬ್ಬರನ್ನು ಅಹ್ಮದಾಬಾದ್ ಪೊಲೀಸರು ಸೋಮವಾರ ಇಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಪೆರೋಲ್ ಮೇಲೆ ಬಿಡುಗಡೆಗೊಂಡು ತಲೆಮರೆಸಿಕೊಂಡಿದ್ದ ನಾಲ್ವರ ಪೈಕಿ ಮೂವರು ವಾಪಸ್ ಜೈಲು ಸೇರಿದ್ದಾರೆ.

  ಪಿಂಟು ಜಡೇಜಾ ಮತ್ತು ದಿನೇಶ ಬಾರ್ಗೆ ಬಂಧಿತ ಅಪರಾಧಿಗಳು. ಇವರನ್ನು ಅನುಕ್ರಮವಾಗಿ ಮೇ ಮತ್ತು ಜೂನ್‌ನಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

ಪೆರೋಲ್‌ನಲ್ಲಿ ಬಿಡುಗಡೆಗೊಂಡಿದ್ದ ನಾಲ್ವರು ಅವಧಿ ಮುಗಿದ ಬಳಿಕವೂ ಜೈಲಿಗೆ ಮರಳದಿದ್ದ ಹಿನ್ನೆಲೆಯಲ್ಲಿ ಸಾಬರಮತಿ ಸೆಂಟ್ರಲ್ ಜೈಲಿನ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದರು. ಈ ಪೈಕಿ ಪ್ರಕಾಶ ಚಾರಾ ಎಂಬಾತ ರವಿವಾರ ಪೊಲೀಸರ ಬಲೆಗೆ ಬಿದ್ದಿದ್ದ. ಶಶಿಕಾಂತ ಕದಂ ಎಂಬಾತ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲಿಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 ನರೋಡಾ ಪಾಟಿಯಾ ಹತ್ಯಾಕಾಂಡ ಪ್ರಕರಣದಲ್ಲಿ ಮಾಜಿ ಬಿಜೆಪಿ ಸಚಿವೆ ಮಾಯಾ ಕೊಡ್ನಾನಿ ಮತ್ತು ಈ ನಾಲ್ವರು ಸೇರಿದಂತೆ 32 ಜನರಿಗೆ ವಿಶೇಷ ಸಿಟ್ ನ್ಯಾಯಾಲಯವು 2012,ಆ.30ರಂದು ಜೀವಾವಧಿ ಶಿಕ್ಷೆಯನ್ನು ಘೋಷಿಸಿತ್ತು.

ಶಿಕ್ಷೆಯ ವಿರುದ್ಧ ಅವರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ಗುಜರಾತ್ ಉಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದೆ.

2002,ಫೆ.28ರಂದು ಅಹ್ಮದಾಬಾದ್‌ನ ನರೋಡಾ ಪಾಟಿಯಾ ಪ್ರದೇಶದಲ್ಲಿ ಭುಗಿಲೆದ್ದಿದ್ದ ಕೋಮು ದಂಗೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದ 97 ಜನರು ಕೊಲ್ಲಲ್ಪಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X