ವೇಶ್ಯಾವಾಟಿಕೆ ದಂಧೆ: ಐವರ ಬಂಧನ

ಬೆಂಗಳೂರು, ಜು.25: ಅಪಾರ್ಟ್‌ಮೆಂಟ್‌ವೊಂದರಲ್ಲಿ ಹೊರ ರಾಜ್ಯದಿಂದ ಹುಡುಗಿಯರನ್ನು ಕರೆತಂದು ಅವರಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆೆ ನಡೆಸುತ್ತಿದ್ದ ಆರೋಪದ ಮೇಲೆ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿ ವಿಜಯ್, ಜಗದೀಶ್, ಕಿಶೋರ್, ಶಿವಕುಮಾರ್, ಸಿದ್ದರಾಮರೆಡ್ಡಿ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಹೊರ ರಾಜ್ಯದಿಂದ ಯುವತಿಯರನ್ನು ನಗರಕ್ಕೆ ಕರೆತಂದು ಹೆಣ್ಣೂರು ಬಾಬುಸಾಬ್ ಪಾಳ್ಯ, ಗೋಲ್ಡನ್ ಆರೋ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಸಂಗ್ರಹಿಸಿ ದಾಳಿ ಮಾಡಿದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ.
Next Story





