Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೆರುಸಲೇಂ: ಮಸೀದಿ ಆವರಣದಲ್ಲಿ ಲೋಹಶೋಧಕಗಳ...

ಜೆರುಸಲೇಂ: ಮಸೀದಿ ಆವರಣದಲ್ಲಿ ಲೋಹಶೋಧಕಗಳ ತೆರವು ಆರಂಭ

ವಾರ್ತಾಭಾರತಿವಾರ್ತಾಭಾರತಿ25 July 2017 7:37 PM IST
share
ಜೆರುಸಲೇಂ: ಮಸೀದಿ ಆವರಣದಲ್ಲಿ ಲೋಹಶೋಧಕಗಳ ತೆರವು ಆರಂಭ

ಜೆರುಸಲೇಂ, ಜು. 25: ಜೆರುಸಲೇಂನ ಅಲ್-ಅಕ್ಸ ಮಸೀದಿಯ ಆವರಣದಲ್ಲಿ ಸ್ಥಾಪಿಸಲಾಗಿರುವ ಲೋಹಶೋಧಕಗಳನ್ನು ತೆರವುಗೊಳಿಸುವ ಕಾರ್ಯವನ್ನು ಇಸ್ರೇಲ್ ಮಂಗಳವಾರ ಆರಂಭಿಸಿದೆ.

ಭದ್ರತಾ ಮಿತ್ರಪಕ್ಷ ಜೋರ್ಡಾನ್ ಸೇರಿದಂತೆ ಮುಸ್ಲಿಮ್ ಜಗತ್ತಿನೊಂದಿಗೆ ಏರ್ಪಟ್ಟಿರುವ ಬಿಕ್ಕಟ್ಟನ್ನು ತಿಳಿಗೊಳಿಸುವ ಉದ್ದೇಶದಿಂದ ಅದು ಈ ಕ್ರಮ ತೆಗೆದುಕೊಂಡಿದೆ.

ಈ ಧಾರ್ಮಿಕ ಆವರಣದ ಉಸ್ತುವಾರಿಯನ್ನು ಇಸ್ರೇಲ್ ಮತ್ತು ಜೋರ್ಡಾನ್‌ಗಳು ಜಂಟಿಯಾಗಿ ಹೊಂದಿವೆ.

ಜೋರ್ಡಾನ್‌ನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಲ್ಲಿ ನಡೆದ ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಜೋರ್ಡಾನ್‌ನೊಂದಿಗೆ ಏರ್ಪಟ್ಟಿದ್ದ 24 ಗಂಟೆಗಳ ರಾಜಕೀಯ ಬಿಕ್ಕಟ್ಟು ತಿಳಿಯಾದ ಹಿನ್ನೆಲೆಯಲ್ಲಿ ಲೋಹಶೋಧಕಗಳನ್ನು ತೆರವುಗೊಳಿಸಲಾಗಿದೆ.

ಸ್ಕ್ರೂಡ್ರೈವರ್‌ನಿಂದ ತಿವಿಯಲು ಬಂದ ಇಬ್ಬರು ಜೋರ್ಡಾನಿಯನ್ನರ ಮೇಲೆ ಇಸ್ರೇಲ್ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದಾಗ ಇಬ್ಬರೂ ಜೋರ್ಡಾನಿಯನ್ನರು ಮೃತಪಟ್ಟಿರುವುದನ್ನು ಸ್ಮರಿಸಬಹುದಾಗಿದೆ. ಜೋರ್ಡಾನ್‌ನಲ್ಲಿರುವ ಇಸ್ರೇಲ್ ರಾಯಭಾರ ಸಿಬ್ಬಂದಿ ಸೋಮವಾರ ರಾತ್ರಿ ಇಸ್ರೇಲ್‌ಗೆ ವಾಪಸಾಗಿದ್ದಾರೆ.

ತನಿಖೆ ಎದುರಿಸದೆ ಭದ್ರತಾ ಸಿಬ್ಬಂದಿ ಜೋರ್ಡಾನ್‌ನಿಂದ ಹೊರ ಹೋಗುವಂತಿಲ್ಲ ಎಂದು ಜೋರ್ಡಾನ್ ಆರಂಭದಲ್ಲಿ ಹೇಳಿತ್ತು. ಭದ್ರತಾ ಸಿಬ್ಬಂದಿಗೆ ರಾಜತಾಂತ್ರಿಕ ರಕ್ಷಣೆ ಇದೆ ಎಂಬ ವಾದವನ್ನು ಇಸ್ರೇಲ್ ಮುಂದಿಟ್ಟಿತ್ತು.

ಇಬ್ಬರು ಇಸ್ರೇಲಿ ಪೊಲೀಸ್ ಕಾವಲುಗಾರರನ್ನು ಬಂದೂಕುಧಾರಿಗಳು ಕೊಂದ ಬಳಿಕ, ಆವರಣದ ದ್ವಾರಗಳಿಗೆ ಇಸ್ರೇಲ್ ಲೋಹಶೋಧಕಗಳನ್ನು ಅಳವಡಿಸಿತ್ತು. ಇದು ಮುಸ್ಲಿಮ್ ಜಗತ್ತಿನ ಆಕ್ರೋಶಕ್ಕೆ ಕಾರಣವಾಯಿತು. ಇದರ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದವು.

ಇಸ್ರೇಲ್, ಜೋರ್ಡಾನ್ ನಾಯಕರ ಮಾತುಕತೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಜೋರ್ಡಾನ್ ದೊರೆ ದ್ವಿತೀಯ ಅಬ್ದುಲ್ಲಾ ಸೋಮವಾರ ತಡರಾತ್ರಿ ಬಿಕ್ಕಟ್ಟಿನ ಬಗ್ಗೆ ಫೋನ್‌ನಲ್ಲಿ ಚರ್ಚಿಸಿದರು.

  ಜೆರುಸಲೇಂನ ಹಳೆನಗರದಲ್ಲಿ ಅಲ್-ಅಕ್ಸ ಮಸೀದಿಯನ್ನು ಒಳಗೊಂಡ 37 ಎಕರೆ ಜಮೀನಿನ ಬಗ್ಗೆಯೂ ಅವರು ಮಾತುಕತೆ ನಡೆಸಿದರು.

ಈ ಜಮೀನು ಇಸ್ಲಾಮ್‌ನ ಮೂರನೆ ಅತ್ಯಂತ ಪವಿತ್ರ ಹಾಗೂ ಜುಡಾಯಿಸಮ್ (ಯುಹೂದಿಗಳ ಧರ್ಮ)ನ ಅತ್ಯಂತ ಪವಿತ್ರ ಸ್ಥಳವಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿರುಸಿನ ರಾಜತಾಂತ್ರಿಕ ಚಟುವಟಿಕೆಗಳು ನಡೆದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಧ್ಯಪ್ರಾಚ್ಯ ರಾಯಭಾರಿ ಜಾಸನ್ ಗ್ರೀನ್‌ಬ್ಲಾಟ್ ಸೋಮವಾರ ಜೆರುಸಲೇಂನಲ್ಲಿ ನೆತನ್ಯಾಹುರನ್ನು ಭೇಟಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X