Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಎಸ್‌ಟಿ ಕರಡು ಜನರ ಮುಂದಿಡುವಲ್ಲಿ...

ಜಿಎಸ್‌ಟಿ ಕರಡು ಜನರ ಮುಂದಿಡುವಲ್ಲಿ ಜನಪ್ರತಿನಿಧಿಗಳು ವಿಫಲ: ಗುಜ್ಜಾಡಿ ಪ್ರಭಾಕರ ನಾಯಕ್

ವಾರ್ತಾಭಾರತಿವಾರ್ತಾಭಾರತಿ25 July 2017 8:19 PM IST
share
ಜಿಎಸ್‌ಟಿ ಕರಡು ಜನರ ಮುಂದಿಡುವಲ್ಲಿ ಜನಪ್ರತಿನಿಧಿಗಳು ವಿಫಲ: ಗುಜ್ಜಾಡಿ ಪ್ರಭಾಕರ ನಾಯಕ್

ಉಡುಪಿ, ಜು.25: ಜಿಎಸ್‌ಟಿ ತೆರಿಗೆಗೆ ಸಂಬಂಧಿಸಿದಂತೆ ಸಂವಿಧಾನದಲ್ಲಿ ತಿದ್ದುಪಡಿ ತರುವ ಮೊದಲು ಕೇಂದ್ರ ಸರಕಾರ ಅದರ ಕರಡು ಪ್ರತಿಯನ್ನು ಜನರ ಮುಂದೆ ಇಟ್ಟು ಆರು ತಿಂಗಳ ಕಾಲಾವಕಾಶವನ್ನು ನೀಡಿತ್ತು. ಆದರೆ ಶಾಸಕರು, ಸಂಸದರು ತಮ್ಮ ಕರ್ತವ್ಯವನ್ನು ಮರೆತು ಹೊಸ ಕಾನೂನು ಅನುಷ್ಠಾನದ ಬಗ್ಗೆ ಗಮನ ಕೊಡಲಿಲ್ಲ. ಇದನ್ನು ಜನರ ಮುಂದೆ ಇಡುವ ಕೆಲಸ ಮಾಡಲಿಲ್ಲ. ಇದರಿಂದ ಗ್ರಾಹಕರಿಗೆ ಬೇಕಾದ ರೀತಿಯ ತೆರಿಗೆ ವ್ಯವಸ್ಥೆ ಅನುಷ್ಠಾನಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಲೆಕ್ಕಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಆರೋಪಿಸಿದ್ದಾರೆ.

ಉಡುಪಿ ಬಳಕೆದಾರರ ವೇದಿಕೆಯ ವತಿಯಿಂದ ಮಂಗಳವಾರ ಜಿಲ್ಲಾ ಮಾಹಿತಿ ಕೇಂದ್ರದಲ್ಲಿ ಆಯೋಜಿಸಲಾದ ಜಿಎಸ್‌ಟಿ ಕುರಿತ ಮಾಹಿತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತಿದ್ದರು.

ಸಾರ್ವಜನಿಕರ ಯಾವುದೇ ಆಕ್ಷೇಪ ಬಾರದ ಕಾರಣ ಸರಕಾರ ಈ ಕರಡನ್ನು ಯಥಾವತ್ತಾಗಿ ಜಾರಿಗೆ ತಂದಿತ್ತು. ಆದರೆ ಈಗ ಕೆಲವರು ವಸ್ತುಗಳಿಗೆ ತೆರಿಗೆ ವಿಧಿಸಿರುವುದಕ್ಕೆ ಬೊಬ್ಬೆ ಹಾಕುತ್ತಿದ್ದಾರೆ ಎಂದು ಟೀಕಿಸಿದ ಅವರು, ಜುಲೈ ತಿಂಗಳ ಕೊನೆಯಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆ ಸೇರಲಿದ್ದು, ಅದರಲ್ಲಿ ಕೆಲ ವೊಂದು ತಿದ್ದುಪಡಿ ತರುವ ಮೂಲಕ ಗ್ರಾಹಕರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದರು.

ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಾಮಾನ್ಯ ದಿನಬಳಕೆ ವಸ್ತುಗಳ ಮೇಲೆ ಶೇ.5, ಕೈಗಾರಿಕಾ ವಸ್ತುಗಳ ಮೇಲೆ ಶೇ.12, ವಿಲಾಸಿ ವಸ್ತುಗಳ ಮೇಲೆ ಶೇ.18 ಹಾಗೂ ಜನ ಹೆಚ್ಚು ಬಳಕೆ ಮಾಡದಂತಹ ವಸ್ತುಗಳ ಮೇಲೆ ಶೇ.28ರಷ್ಟು ಮತ್ತು ಚಿನ್ನಾಭರಣ ವಸ್ತುಗಳ ಮೇಲೆ ವಿಶೇಷ ರಿಯಾಯಿತಿಯಂತೆ ಶೇ.3ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಎಸ್‌ಟಿ ಜಾರಿಗೆ ಬರುವ ಅಂದರೆ ಜೂ.30ರ ಮೊದಲು ಉತ್ಪಾದನೆ ಯಾಗಿ ಮಾರುಕಟ್ಟೆಯಲ್ಲಿರುವ ವಸ್ತುಗಳ ಮೇಲಿನ ತೆರಿಗೆ ವಿಚಾರವು ಇದೀಗ ಗೊಂದಲದಲ್ಲಿದ್ದು, ಇದು ದಾಸ್ತಾನು ಖಾಲಿಯಾಗುವವರೆಗೆ ಮುಂದುವರೆಯ ಲಿದೆ. ಮುಂದೆ ಎಲ್ಲ ಗೊಂದಲ ನಿವಾರಣೆಯಾಗಿ ಗ್ರಾಹಕರಿಗೆ ಲಾಭವಾಗುವ ದರ ಬರಲಿದೆ ಎಂದರು.

ತೆರಿಗೆ ಮೇಲಿನ ತೆರಿಗೆ ಪದ್ಧತಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ನೂತನ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹೀಗಾಗಿ ಕೆಲ ವಸ್ತುಗಳ ದರ ಕಡಿಮೆ ಆಗಲಿದೆ. ಆದರೆ ಇದರ ಲಾಭ ಗ್ರಾಹಕರಿಗೆ ತಕ್ಷಣಕ್ಕೆ ಸಿಗುವುದು ಕಷ್ಟ. ಸ್ವಲ್ಪ ಸಮಯ ಬೇಕಾಗುತ್ತದೆ. ಸದ್ಯಕ್ಕೆ ಕೇಂದ್ರ ಸರಕಾರ ಜಿಎಸ್‌ಟಿಯಿಂದ ಗ್ರಾಹಕರಿಗೆ ಆಗುವ ಲಾಭವನ್ನು ಪರಿಶೀಲಿಸಲು ತಂಡವನ್ನು ರಚನೆ ಮಾಡಿದ್ದು, ಅದು ದೇಶಾದ್ಯಂತ ಕಾರ್ಯಾಚರಿಸಲಿದೆ ಎಂದು ಅವರು ಹೇಳಿದರು.

ಜಿಎಸ್‌ಟಿ ತೆರಿಗೆ ಪದ್ಧತಿಯು ಗ್ರಾಹಕರು ಹಾಗೂ ಬಳಕೆದಾರರ ಜಯ ಆಗಿದೆ. ಮುಂದಿನ ದಿನಗಳಲ್ಲಿ ವಸ್ತುಗಳು ಹಾಗೂ ಸೇವೆಗಳ ಬೆಲೆ ಕಡಿಮೆ ಆಗುತ್ತದೆ. ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಿಂದ ಹೊರಗೆ ಇಡಲಾಗಿದೆ. ಮುಂದೆ ಇದನ್ನು ಕೂಡ ಇದರ ವ್ಯಾಪ್ತಿಗೆ ತಂದಾಗ ದೇಶದ ಎಲ್ಲ ಕಡೆ ಒಂದೇ ದರ ಆಗಲಿದೆ ಎಂದು ಅವರು ತಿಳಿಸಿದರು.

ವೇದಿಕೆಯ ಸಂಚಾಲಕ ದಾಮೋದರ ಐತಾಳ್ ಸ್ವಾಗತಿಸಿದರು. ವಿಶ್ವಸ್ಥ ಎಚ್. ಶಾಂತರಾಮ್ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟಿ.ಚಂದ್ರಶೇಖರ್ ವಂದಿಸಿದರು. ಎ.ಪಿ.ಕೊಡಂಚ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X