ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಕುಂದಾಪುರ, ಜು.25: ಕುಂಭಾಶಿ ಗ್ರಾಮದ ವಿನಾಯಕ ನಗರದ ರಮೇಶ್ ಶೇರೆಗಾರ ಎಂಬವರ ಪತ್ನಿ ಲಲಿತಾ (50) ಎಂಬವರು ಜು.24ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಂಬದಕೋಣೆ ಗ್ರಾಮದ ಶೀನ ದೇವಾಡಿಗ(52) ಎಂಬವರು ಮಾನಸಿಕವಾಗಿ ನೊಂದು ಜು.24ರಂದು ರಾತ್ರಿ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಾಸೆಬೈಲು: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ರಟ್ಟಾಡಿ ಗ್ರಾಮದ ಹೊರ್ಲಿಜೆಡ್ಡು ನಿವಾಸಿ ಕರುಣಾಕರ ಶೆಟ್ಟಿ ಎಂಬವರು ಆರ್ಥಿಕ ಅಡಚಣೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜು.24ರಂದು ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





