ಸಮಾಜ ಕಲ್ಯಾಣ ಇಲಾಖೆ ವರದಿಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ
.jpg)
ಬೆಂಗಳೂರು, ಜು. 26: ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಕಲ್ಪಿಸುವ ಸಂಬಂಧ ‘ಲಿಂಗಾಯತ ಧರ್ಮ ಮಹಾ ಸಭಾ’ದಿಂದ ಪತ್ರವೊಂದು ಬಂದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ವರದಿ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದರು.
ಬುಧವಾರ ವಿಧಾನಸೌಧದಲ್ಲಿನ ತನ್ನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯ ಒಗ್ಗಟ್ಟಾಗಿ ಪ್ರತ್ಯೇಕ ಧರ್ಮ ಸ್ಥಾನಮಾನ ಕಲ್ಪಿಸುವ ಸಂಬಂಧ ಮನವಿ ಮಾಡಿದರೆ, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
Next Story





