Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ರಸ್ತೆ ಬದಿ ಅಂಗಡಿಗಳನ್ನು...

ಮಂಗಳೂರು: ರಸ್ತೆ ಬದಿ ಅಂಗಡಿಗಳನ್ನು ತೆರವುಗೊಳಿಸಿದ ಮನಪಾ, ಸಂಚಾರ ಪೊಲೀಸರು

ಮೇಯರ್ ವಿರುದ್ಧ ಧಿಕ್ಕಾರ ಕೂಗಿದ ವ್ಯಾಪಾರಿಗಳು

ವಾರ್ತಾಭಾರತಿವಾರ್ತಾಭಾರತಿ26 July 2017 7:18 PM IST
share
ಮಂಗಳೂರು: ರಸ್ತೆ ಬದಿ ಅಂಗಡಿಗಳನ್ನು ತೆರವುಗೊಳಿಸಿದ ಮನಪಾ, ಸಂಚಾರ ಪೊಲೀಸರು

ಮಂಗಳೂರು, ಜು.26: ನಗರದ ಪಿವಿಎಸ್ ವೃತ್ತ ಬಳಿಯಿಂದ ಸ್ಟೇಟ್‌ಬ್ಯಾಂಕ್‌ವರೆಗೆ ರಸ್ತೆ ಬದಿ ಫುಟ್‌ಪಾತ್‌ನಲ್ಲಿ ಅಂಗಡಿ, ಮೊಬೈಲ್ ಕ್ಯಾಂಟೀನ್, ಅಕ್ರಮ ಪಾರ್ಕಿಂಗ್ ತೆರವಿಗೆ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಮೇಯರ್ ಕವಿತಾ ಸನಿಲ್‌ ಬುಧವಾರ ಸಂಚಾರ ಪೊಲೀಸರ ಸಮ್ಮುಖ ಸಮೀಕ್ಷೆ ನಡೆಸಿ ಗಮನ ಸೆಳೆದರು.

ಫುಟ್‌ಪಾತ್‌ ಮತ್ತು ರಸ್ತೆ ಬದಿಯಿದ್ದ ಅಂಗಡಿ ತೆರವಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಮೇಯರ್, ಖಾಸಗಿ ಕಟ್ಟಡಗಳ ಮುಂಭಾಗ ಮನಪಾಗೆ ಸೇರಿದ ಜಾಗದಲ್ಲಿ ಇದ್ದ ನೋ ಪಾರ್ಕಿಂಗ್ ಬೋರ್ಡ್‌ಗಳನ್ನು ಮನಪಾ ಸಿಬ್ಬಂದಿ ಮೂಲಕ ತೆರವುಗೊಳಿಸಿದರು. ನಗರದ ಹಂಪನಕಟ್ಟೆಯಲ್ಲಿ ಫುಟ್‌ಪಾತ್‌ ನಲ್ಲಿ ಚಪ್ಪಲಿ, ಬಟ್ಟೆ ಅಂಗಡಿಗಳ ಮುಂಭಾಗ ಫುಟ್‌ಪಾತ್‌ ನಲ್ಲಿಟ್ಟಿದ್ದ ಮಾರಾಟ ಸಾಮಗ್ರಿಗಳನ್ನು ತೆರವುಗೊಳಿಸಿ, ಸಲಕರಣೆಗಳನ್ನು ಮನಪಾ ಲಾರಿಗೆ ಹಾಕಿ ಸಾಗಿಸಲಾಯಿತು.

ಪಿವಿಎಸ್‌ನಿಂದ ಬಂಟ್ಸ್‌ಹಾಸ್ಟೆಲ್ ಕಡೆಗೆ ತೆರಳುವ ರಸ್ತೆಯಲ್ಲಿ ಪಿವಿಎಸ್ ಅಶ್ವಥ ಕಟ್ಟೆಯ ಬಳಿ ಮಾತ್ರ ಇನ್ನು ರಿಕ್ಷಾ ಪಾರ್ಕಿಂಗ್ ಇರಲಿದೆ. ಸಂಚಾರ ದಟ್ಟಣೆ ನಿಯಂತ್ರಣ ಹಿನ್ನೆಲೆಯಲ್ಲಿ ಇಲ್ಲಿನ ಬಸ್ ನಿಲ್ದಾಣ ಬಳಿ ರಿಕ್ಷಾ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಮೇಯರ್ ಮತ್ತು ಸಂಚಾರಿ ಪೊಲೀಸರು ರಿಕ್ಷಾ ಚಾಲಕರಿಗೆ ಸೂಚಿಸಿದರು.

ನಗರದ ಕರಂಗಲ್ಪಾಡಿ ಬಳಿ ರಸ್ತೆ ಮಧ್ಯೆ ಅಟೋ ನಿಲ್ದಾಣದಿಂದ ವಾಹನ ಓಡಾಟಕ್ಕೆ ತೊಂದರೆ ಆಗುತ್ತಿದೆ ಎಂದು ಸಂಚಾರ ಪೊಲೀಸರು ಗಮನ ಸೆಳೆದರು. ಇಲ್ಲಿನ ಜಂಕ್ಷನ್ ಬಳಿ ಖಾಸಗಿ ಕಟ್ಟಡ ಮುಂಭಾಗ ಪಾರ್ಕಿಂಗ್ ಮಾಡಲಾಗುತ್ತಿದೆ. ತೆರವಿಗೆ ಮುಂದಾದಾಗ ಈ ಸ್ಥಳ ನಮ್ಮದು ಎಂದು ಕಟ್ಟಡದ ಮಾಲಕರು ಹೇಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದರು. ಇ

ದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಕಟ್ಟಡದ ಮುಂಭಾಗದ ಜಾಗ ಯಾರಿಗೆ ಸೇರಿದೆ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ, ಮನಪಾಗೆ ಜಾಗ ಸೇರಿದ್ದರೆ ಸ್ಥಳದಲ್ಲಿ ವಾಹನ ಪಾರ್ಕಿಂಗ್‌ಗೆ ಅವಕಾಶ ನೀಡಬಾರದು, ರಸ್ತೆ ವಿಸ್ತರಣೆ ನಡೆಸಬೇಕು ಎಂದು ಸೂಚಿಸಿದರು.

ರಸ್ತೆಯಲ್ಲಿರುವ ಉಬ್ಬು ತಗ್ಗುಗಳನ್ನು ಸರಿಪಡಿಸಬೇಕು, ರಸ್ತೆ ಬದಿಯ ಕಿತ್ತುಹೋಗಿರುವ ಇಂಟರ್‌ಲಾಕ್‌ಗಳನ್ನು ದುರಸ್ತಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಮೇಯರ್, ಫುಟ್‌ಪಾತ್‌ ನಲ್ಲಿ ಇನ್ನುಮುಂದೆ ವಾಹನ ಪಾರ್ಕಿಂಗ್ ಮಾಡಿದರೆ ದಂಡ ವಿಧಿಸುವ ಜತೆಗೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಉಪಮೇಯರ್ ರಜನೀಶ್, ಸಚೇತಕ ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ರವೂಫ್, ಸಬಿತಾ ಮಿಸ್ಕಿತ್, ಕಾರ್ಪೋರೇಟರ್‌ಗಳಾದ ರತಿಕಲಾ, ಅಪ್ಪಿ, ಕವಿತಾ, ರಾಧಾಕೃಷ್ಣ, ಡಿಸಿಪಿ ಹನುಮಂತರಾಯ, ಎಸಿಪಿ ತಿಲಕ್‌ಚಂದ್ರ, ಸಂಚಾರ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಹಂಪನಕಟ್ಟೆ ಮಿಲಾಗ್ರಿಸ್‌ನ ಸೂರಜ್ ಅಟೋ ನಿಲ್ದಾಣದಲ್ಲಿ ವಿಧಾನ ಪರಿಷತ್ ಸಚೇತಕ ಐವನ್ ಡಿಸೋಜ ಅವರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಕಮಾನು ನಿರ್ಮಿಸಲಾಗಿದೆ. ಇದು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದಕ್ಕೆ ಅನುಮತಿ ನೀಡಿದವರು ಯಾರು ಎಂದು ಸ್ಥಳೀಯ ಕಾರ್ಪೋರೇಟರ್ ಎ.ಸಿ. ವಿನಯರಾಜ್ ಪ್ರಶ್ನಿಸಿದರಲ್ಲದೆ, ಈ ಕಮಾನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮೇಯರ್ ಕಮಾನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಮನಪಾ ಆಯುಕ್ತ ಮಹಮ್ಮದ್ ನಝೀರ್‌ಗೆ ಸೂಚಿಸಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಿದ ಕಾರಣ ಕಮಾನು ತೆರವಿನ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ಆಯುಕ್ತರು ಹೇಳಿದರು.

ಅಧಿಕಾರಿಗಳ ಜತೆ ನಗರ ಪ್ರದಕ್ಷಿಣೆ ನಡೆಸಿದ ಕಾರಣ ನಗರದ ಸಮಸ್ಯೆಗಳನ್ನು ಖುದ್ದಾಗಿ ತಿಳಿದುಕೊಳ್ಳಲು ಸಾಧ್ಯವಾಯಿತು. ಸಂಚಾರ ದಟ್ಟಣೆಯ ಸಮಸ್ಯೆ ಜತೆಗೆ ಡ್ರೈನೇಜ್ ಸೋರಿಕೆ, ಫುಟ್‌ಪಾತ್‌ ಸ್ಲ್ಯಾಬ್ ಕಿತ್ತುಹೋಗಿರುವುದು, ಬಸ್ ನಿಲ್ದಾಣಗಳ ಅವ್ಯವಸ್ಥೆ ಗಮನಕ್ಕೆ ಬಂದಿದೆ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಫುಟ್‌ಪಾತ್‌ ಅತಿಕ್ರಮಣ ತೆರವು ಕಾರ್ಯಾಚರಣೆ ಯಶಸ್ವಿಯಾಗಿದೆ. ಸ್ಟೇಟ್‌ಬ್ಯಾಂಕ್ ಬಳಿ ಕೆಲ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಅವರಿಗೆ ವಾಸ್ತವ ಮನವರಿಕೆ ಮಾಡಲಾಗಿದೆ. ಅಕ್ರಮ ಗೂಡಂಗಡಿ, ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಬೇರೊಂದು ರಸ್ತೆಯಲ್ಲಿ ನಗರ ಪ್ರದಕ್ಷಿಣೆ ಮುಂದುವರೆಸಲಾಗುವುದು ಎಂದು ಮೇಯರ್ ಕವಿತಾ ಸನಿಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಮೇಯರ್ ಮತ್ತು ವ್ಯಾಪಾರಿಗಳ ಮಧ್ಯೆ ಮಾತಿನ ಚಕಮಕಿ
ನಗರದ ಪಿವಿಎಸ್ ಸರ್ಕಲ್‌ನಿಂದ ಜ್ಯೋತಿ ಮಾರ್ಗವಾಗಿ ಸ್ಟೇಟ್‌ಬ್ಯಾಂಕ್‌ವರೆಗೂ ಮೇಯರ್ ನೇತೃತ್ವದಲ್ಲಿ ಮನಪಾ ಮತ್ತು ಸಂಚಾರ ಪೊಲೀಸ್ ಅಧಿಕಾರಿಗಳು ಸಂಚಾರ ಸುಧಾರಣೆಗಾಗಿ ಪಾದಯಾತ್ರೆ ನಡೆಸಿ ರಸ್ತೆಯಲ್ಲಿ ಕಂಡು ಬಂದ ಅನಧಿಕೃತ ಪಾರ್ಕಿಂಗ್, ರಸ್ತೆ ಫುಟ್‌ಪಾತ್ ಒತ್ತುವರಿ ತೆರವು, ಸಂಚಾರಕ್ಕೆ ಅಡ್ಡಿಯಾಗುವ ಗೂಡಂಗಡಿ ತೆರವು ಕಾರ್ಯಚರಣೆ ನಡೆಸಿದರು. ಈ ಸಂದರ್ಭ ಸ್ಟೇಟ್‌ಬ್ಯಾಂಕ್ ಸಮೀಪದ ಸಿಟಿ ಬಸ್ ನಿಲ್ದಾಣದ ಬಳಿಯ ಬೀದಿಬದಿ ವ್ಯಾಪಾರಸ್ಥರು ಮತ್ತು ಮೇಯರ್ ಕವಿತಾ ಸನಿಲ್ ನಡುವೆ ಮಾತಿನ ಚಕಮಕಿ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X