Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಮಾನ್ಯ ವಲಯಗಳ ನಿಯಂತ್ರಣಕ್ಕೆ...

ಸಾಮಾನ್ಯ ವಲಯಗಳ ನಿಯಂತ್ರಣಕ್ಕೆ ಮಾರ್ಪಾಡು: ಆಮ್‌ಆದ್ಮಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ26 July 2017 7:26 PM IST
share

ಬೆಂಗಳೂರು, ಜು.26: ಸಾಮಾನ್ಯ ವಲಯಗಳ ನಿಯಂತ್ರಣಕ್ಕೆ ಹೊಸದಾಗಿ ಮಾರ್ಪಾಡುಗಳನ್ನು ತರಲು ಉದ್ದೇಶಿಸಿರುವ ನಗರಾಭಿವೃದ್ಧಿ ಇಲಾಖೆಯ ನಡೆಯನ್ನು ಆಮ್‌ಆದ್ಮಿ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ಸಂಚಾಲಕಿ ಶಾಂತಾಲಾ ದಾಮ್ಲೆ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಹಾಗೂ ಹೈಕೋರ್ಟ್‌ನ ಆದೇಶ ಉಲ್ಲಂಘನೆ ಮಾಡಿ ಸಾಮಾನ್ಯ ವಲಯಗಳ ನಿಯಂತ್ರಣಕ್ಕೆ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ. ಇಂತಹ ನಿಯಂತ್ರಣಗಳಿಂದ ಸಾರ್ವಜನಿಕರ ಬದುಕಿನ ವೆುೀಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದರು.


ಈಗಾಗಲೇ ಬಿಡಿಎ ಮತ್ತು ಯುಡಿಡಿ ಸ್ಥಳೀಯ ವಾಸ ಸ್ಥಳಗಳನ್ನು ವಾಣಿಜ್ಯೀಕರಣ ಮಾಡುವ ಅಫಿಡೆವಿಟ್‌ಗಳ ಕಡತವನ್ನು ಸಲ್ಲಿಸಿದ್ದಾರೆ. ಸಂವಿಧಾನದ ಪ್ರಕಾರ ಯಾವುದೇ ಯೋಜನೆಯನ್ನು ರೂಪಿಸುವಾಗ ಸಾರ್ವಜನಿಕರನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದೆ. ಆದರೆ, ಈ ಮಾರ್ಪಾಡುಗಳನ್ನು ತರುವ ವೇಳೆ ಯಾವುದೇ ಸಾರ್ವಜನಿಕ ಸಂಘ-ಸಂಸ್ಥೆಗಳನ್ನು, ಸ್ಥಳೀಯರನ್ನು ಪರಿಗಣಿಸಿಲ್ಲ ಎಂದು ದೂರಿದರು. ಮುಂದಿನ 2035ರ ಅವಧಿಗೆ ಮಾಸ್ಟರ್ ಪ್ಲಾನ್ ತಯಾರಿಸುತ್ತಿದ್ದು, ಇದರಲ್ಲಿ ಒಂದು ವಲಯದ ನಿಯಂತ್ರಣ ಯೋಜನೆಯನ್ನು ಎಲ್ಲ ನಗರಗಳಿಗೆ ಅನ್ವಯ ಮಾಡುತ್ತಿರುವುದು ಯೋಜನೆಯ ಪರಿಕಲ್ಪನೆಯನ್ನು ಅಣಕಿಸಿದಂತಿದೆ. ತಳ ಸಮುದಾಯಗಳು ವಾಸಿಸುವ 29 ಫೀಟ್‌ಗೂ ಕಡಿಮೆ ಅಗಲದ ರಸ್ತೆಗಳಲ್ಲಿರುವ ಪ್ರದೇಶದಲ್ಲಿ ಈ ಯೋಜನೆ ಅನ್ವಯ ಯಾವುದೇ ವ್ಯಾಪಾರ ಮಾಡುವಂತಿಲ್ಲ ಎಂದು ಹೇಳಿದೆ. ಈ ಮೂಲಕ ಬಡವರ ಬದುಕಿನ ವೆುೀಲೆ ಬರೆ ಎಳೆಯಲು ಮುಂದಾಗಿದ್ದು, ಸಂಪೂರ್ಣ ಬಡವರ ವಿರೋಧಿ ನೀತಿ ಜಾರಿ ಮಾಡಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಡಿಎ ಮತ್ತು ಯುಡಿಡಿ ಈಗಾಗಲೇ ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದನ್ನು ಖಚಿತಪಡಿಸಬೇಕು. ಕೂಡಲೇ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಬೇಕು. ದೀರ್ಘಕಾಲೀನ ಸಮಗ್ರ ಮಾಸ್ಟರ್ ಯೋಜನೆ ಎಂಪಿಸಿ ತಯಾರಿಸಬೇಕು ಮತ್ತು ಮುಂದಿನ 25 ವರ್ಷಗಳಲ್ಲಿ ಯೋಜಿತ ಬೆಳವಣಿಗೆಯನ್ನು ಮುಂದಿಟ್ಟುಕೊಂಡು ಕೆಲಸ ಮಾಡಬೇಕು. ಮಾಸ್ಟರ್ ಪ್ಲಾನ್ ರಚಿಸುವ ವೇಳೆ ಸ್ಥಳೀಯ ಸಮುದಾಯ ಪಾಲ್ಗೊಳ್ಳುವಿಕೆಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X