ಇಬ್ಬರು ಆತ್ಮಹತ್ಯೆ
ಬೆಂಗಳೂರು, ಜು.26: ಮದ್ಯ ಸೇವನೆ ಬಿಡಿಸಿದ್ದರಿಂದ ನೊಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಣಪತಿಪುರದ ಶುಭಾಷ್‌ಚಂದ್ರ ರಸ್ತೆಯ ಬಲರಾಮನ್(41) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಕುಡಿತದ ಚಟ ಅಂಟಿಸಿಕೊಂಡು ಅನಾರೋಗ್ಯಕ್ಕೆ ಸಿಲುಕಿದ್ದ ಬಲರಾಮನ್ ಅವರಿಗೆ ಮನೆಯವರು ಕುಡಿತ ಬಿಡಿಸಿ ಚಿಕಿತ್ಸೆ ಕೊಡಿಸುತ್ತಿದ್ದರಿಂದ ನೊಂದು ಮಂಗಳವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಹಿಳೆ ಆತ್ಮಹತ್ಯೆ: ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದ ಹಲಸೂರಿನ ಎಂವಿ ಗಾರ್ಡನ್‌ನ ರೇವತಿ (25) ಎಂಬುವರು ಮಂಗಳವಾರ ಮಧ್ಯರಾತ್ರಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರು ವರ್ಷಗಳ ಹಿಂದೆ ವಿವಾಹವಾಗಿದ್ದ ರೇವತಿ, ಜೀವನದಲ್ಲಿನ ಜಿಗುಪ್ಸೆಯಿಂದ ರಾತ್ರಿ 12ರ ವೇಳೆ ಮನೆಯಲ್ಲಿ ಎಲ್ಲರು ಮಲಗಿದ್ದಾಗ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.







