ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜು.26: ರಾಜ್ಯ ಸರಕಾರವು 10 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಇಬ್ಬರು ಅಧಿಕಾರಿಗಳ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಡಿ.ಬಿ.ನಟೇಶ್-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ, ಡಾ.ಬಿ.ಆರ್.ಹರೀಶ್-ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ, ಸಿ.ಸತ್ಯಭಾಮ-ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಯೋಜನಾಧಿಕಾರಿ.
ಕೆ.ಅನ್ನಪೂರ್ಣ-ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಉಪ ನಿರ್ದೇಶಕ(ತರಬೇತಿ), ಶಶಿಧರ ಬಗಲಿ-ಧಾರವಾಡದಲ್ಲಿನ ರಾಜ್ಯ ನೀರಾವರಿ ನಿಗಮ ನಿಯಮಿತದ ಮುಖ್ಯ ಆಡಳಿತಾಧಿಕಾರಿ, ರಮೇಶ್ ದೇಸಾಯಿ-ತುಮಕೂರು ಹಾಗೂ ರಾಯದುರ್ಗ ಮತ್ತು ತುಮಕೂರು ಹಾಗೂ ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ.
ಬಸವರಾಜ ಆರ್.ಸೋಮಣ್ಣನವರ್-ಗದಗ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ, ಟಿ.ಆರ್.ಶೋಭಾ-ಬೆಂಗಳೂರಿನ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವಿಶೇಷ ಭೂ ಸ್ವಾಧೀನಾಧಿಕಾರಿ.
ಶಿವಪ್ಪ ಯಲ್ಲಪ್ಪ ಭಜಂತ್ರಿ-ವರ್ಗಾವಣೆ ಆದೇಶವನ್ನು ರದ್ದುಪಡಿಸಿ, ಧಾರವಾಡ ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಯಲ್ಲಿಯೆ ಮುಂದು ವರೆಸಲಾಗಿದೆ. ಹಾಗೂ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಂಪೆನಿಯ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಅಧಿಕ ಪ್ರಭಾರದಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.
ಎನ್.ಸಿದ್ದೇಶ್ವರ್-ದಾವಣಗೆರೆ ಜಿಲ್ಲೆಯ ಉಪ ವಿಭಾಗದ ಉಪ ವಿಭಾಗಾಧಿಕಾರಿ, ಪಿ.ಎನ್.ಲೋಕೇಶ್-ಹಾವೇರಿ ಜಿಲ್ಲೆಯ ಉಪ ವಿಭಾಗಾಧಿಕಾರಿ, ಜಯಶ್ರೀ ಶಿಂತ್ರಿ-ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಧಾರವಾಡ ಜಿಲ್ಲೆಯ ಎನ್‌ಎಚ್‌ಎಐ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಯಲ್ಲಿಯೆ ಮುಂದುವರೆಸಲಾಗಿದೆ.





