ಮೂರನೆ ಆರೋಪಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ
_0.jpg)
ಬೆಂಗಳೂರು, ಜು.26: ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂರನೆ ಆರೋಪಿ ಜ್ಯೋತಿಷಿ ನಿರಂಜನ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಸಂಬಂಧ ಜ್ಯೋತಿಷಿ ನಿರಂಜನ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಅವರು ಕೆಳ ನ್ಯಾಯಾಲಯಕ್ಕೆ ಆರು ತಿಂಗಳಲ್ಲಿ ಸಾಕ್ಷಾಧಾರಗಳನ್ನು ಒದಗಿಸಿ ಅದೇ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಆದೇಶಿದೆ.
Next Story





