ಉಡುಪಿ: ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಉಡುಪಿ, ಜು.26: ಉಡುಪಿ ಜಿಲ್ಲಾ ಮಾಜಿ ಸೈನಿಕರ ವೇದಿಕೆ ಮತ್ತು ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದಲ್ಲಿ ಬುಧವಾರ ಆಯೋಜಿಸಲಾಗಿತ್ತು.
ನಿವೃತ್ತ ಹಿರಿಯ ಸೇನಾಧಿಕಾರಿ ಕರ್ನಲ್ ಬಿ.ರಾಮಚಂದ್ರ ರಾವ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿದರು.
ನಿವೃತ್ತ ಸೇನಾಧಿಕಾರಿಗಳು, ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರು ಹುತಾತ್ಮ ಸ್ಮಾರಕಕ್ಕೆ ಪುಷ್ಪಾಂಜಲಿ ಅರ್ಪಿಸಿ ಗೌರವ ಸಲ್ಲಿಸಿದರು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ಯಶಪಾಲ್ ಸುವರ್ಣ, ಸುಪ್ರಸಾದ್ ಶೆಟ್ಟಿ, ಸಂಧ್ಯಾ ರಮೇಶ್, ಶ್ಯಾಮಲಾ ಕುಂದರ್, ಶೀಲಾ ಕೆ.ಶೆಟ್ಟಿ, ಗೀತಾಂಜಲಿ ಸುವರ್ಣ, ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರವೀಣ್ ಕಪ್ಪೆಟ್ಟು, ನಗರ ಯುವಮೋರ್ಚಾ ಅಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಕಾರ್ಯದರ್ಶಿ ರೋಶನ್ ಶೆಟ್ಟಿ, ಮಾಜಿ ಸೈನಿಕರ ವೇದಿಕೆಯ ಉಪಾಧ್ಯಕ್ಷ ವಾಸುದೇವ್, ಜತೆ ಕಾರ್ಯದರ್ಶಿ ಗಣೇಶ್ ರಾವ್, ಕರ್ನಲ್ ಡಾ.ಎಸ್.ಎಂ.ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.
Next Story





