ನಿತೀಶ್ ಕುಮಾರ್ ರಾಜೀನಾಮೆಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

ಹೊಸದಿಲ್ಲಿ, ಜು.26: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿರುವ ನಂತರ ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಿತೀಶ್ ಅವರನ್ನು ಅಭಿನಂದಿಸಿದ್ದಾರೆ.
“ಈ ಪರಿಸ್ಥಿತಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಪರಿಹಾರ ಕಂಡುಕೊಳ್ಳಲು ನಾನು ಪ್ರಯತ್ನಿಸಿದ್ದೆ. ರಾಜ್ಯದ ಹಿತಾಸಕ್ತಿಯಿಂದ ನಾನು ರಾಜೀನಾಮೇ ಸಲ್ಲಿಸುತ್ತಿದ್ದೇನೆ. ರಾಜಿನಾಮೆಯ ಹೊರತು ನನ್ನ ಬಳಿ ಬೇರೆ ಆಯ್ಕೆಗಳಿಲ್ಲ. ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದರು.
ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, "ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದಕ್ಕೆ ನಿತೀಶ್ ಅವರಿಗೆ ಅಭಿನಂದನೆಗಳು. ದೇಶದ 125 ಕೋಟಿ ಜನರು ನಿಮ್ಮನ್ನು ಸ್ವಾಗತಿಸುತ್ತಾರೆ ಹಾಗೂ ನಿಮ್ಮ ಪ್ರಾಮಾಣಿಕ ನಡೆಯನ್ನು ಬೆಂಬಲಿಸುತ್ತಾರೆ” ಎಂದಿದ್ದಾರೆ.
Next Story





