ನಾಡಿನೆಲ್ಲೆಡೆ ನಾಗರ ಪಂಚಮಿ ಆಚರಣೆ
.jpg)
ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿ ವಿನಾಯಕ ದೇವಸ್ಥಾನ
ಕುತ್ತಾರು,ಜು.27:ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
.jpg)
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದ ನಾಗ ಬನದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ನಾಗರ ದೇವರನ್ನು ಆರಾಧಿಸಲಾಯಿತು. ಮುಂಜಾನೆಯಿಂದ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ಹಾಗೂ ವಿಶೇಷ ಪೂಜೆ ನಡೆಯಿತು.
.jpg)
ಪಿಲಾರು ಲಕ್ಷ್ಮೀ ಗುಡ್ಡೆ ನಾಗ ಬನದಲ್ಲಿ ನಾಗರಪಂಚಮಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
Next Story





