Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶೇಷ ಸಭೆಗೆ ಗೈರು: ಎಸ್.ಪಿ. ವಿರುದ್ದ...

ವಿಶೇಷ ಸಭೆಗೆ ಗೈರು: ಎಸ್.ಪಿ. ವಿರುದ್ದ ಗರಂ ಆದ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ27 July 2017 6:56 PM IST
share

ಶಿವಮೊಗ್ಗ, ಜು. 27: ಜಿಲ್ಲೆಯಲ್ಲಿ ತಲೆದೋರಿರುವ ಮರಳು ಅಭಾವಕ್ಕೆ ಸಂಬಂಧಿಸಿದಂತೆ ಗುರುವಾರ ಜಿ.ಪಂ. ಕಚೇರಿಯಲ್ಲಿ ಕರೆಯಲಾದ ವಿಶೇಷ ಸಾಮಾನ್ಯ ಸಭೆಗೆ ಜಿಲ್ಲಾ ಪೊಲೀಸ್ ವರಿಷ್ಠ ಅಭಿನವ್ ಖರೆ ಗೈರು ಹಾಜರಾಗಿದ್ದಕ್ಕೆ ಜಿ.ಪಂ. ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ’ಕಳೆದ ಸಾಮಾನ್ಯ ಸಭೆಯಲ್ಲಿಯೇ ಮುಂದಿನ ಸಭೆಗೆ ಎಸ್.ಪಿ.ಯವರನ್ನು ಕರೆಯಿಸಬೇಕು ಎಂದು ನಿರ್ಣಯ ಕೈಗೊಳ್ಳಾಗಿತ್ತು. ಆದರೆ ಇಂದಿನ ಸಭೆಗೆ ಅವರು ಗೈರು ಹಾಜರಾಗಿದ್ದಾರೆ. ಹಾಗಿದ್ದರೆ ಈ ವಿಶೇಷ ಸಭೆ ಕರೆದಿರುವುದರ ಔಚಿತ್ಯವಾದರೂ ಏನು?’ ಎಂದು ಸದಸ್ಯರು ಸಿಡಿಮಿಡಿ ವ್ಯಕ್ತಪಡಿಸಿದರು.

’ಇಂದಿನ ಸಭೆಯಲ್ಲಿ ಎಸ್.ಪಿ.ಯವರೇ ಮುಖ್ಯವಾಗಿರಬೇಕಾಗಿತ್ತು. ಅವರಿಲ್ಲದೇ ಸಭೆ ನಡೆಸುವುದು ಬೇಡ. ಎಸ್.ಪಿ.ಯವರ ಬಂದ ನಂತರವೇ ಸಭೆ ನಡೆಸಬೇಕು’ ಎಂದು ಸದಸ್ಯ ಕೆ.ಇ.ಕಾಂತೇಶ್ ಆಗ್ರಹಿಸಿದರು.

ಸಿಇಓ ಡಾ. ಕೆ. ರಾಕೇಶ್‌ಕುಮಾರ್ ಮಾತನಾಡಿ, ’ಕಾಗಿನೆಲೆಯಲ್ಲಿಂದು ಮುಖ್ಯಮಂತ್ರಿಗಳ ಕಾರ್ಯಕ್ರಮವಿದೆ. ಬಂದೋಬಸ್ತ್ ಕಾರ್ಯಕ್ಕೆ ಎಸ್‌ಪಿಯವರು ತೆರಳಿದ್ದಾರೆ. ಈ ಬಗ್ಗೆ ತಮಗೆ ಮಾಹಿತಿ ನೀಡಿದ್ದಾರೆ’ ಎಂದು ಸಭೆಯ ಗಮನಕ್ಕೆ ತಂದರು. ಆದರೆ ಇದಕ್ಕೆ ಸದಸ್ಯರಾದ ವೀರಭದ್ರಪ್ಪ ಪೂಜಾರ್, ಜೆ.ಪಿ.ಯೋಗೀಶ್ ಇತರೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಎಸ್.ಪಿ.ಯವರು ಇಲ್ಲದೆ ಸಭೆ ನಡೆಸುವುದು ಬೇಡ. ಜಿಲ್ಲೆಯಾದ್ಯಂತ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನು ತಡೆಯುವ ಕೆಲಸ ಪೊಲೀಸ್ ಇಲಾಖೆಯಿಂದ ನಡೆಯುತ್ತಿಲ್ಲ. ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ದವೇ ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳು ಸೂಕ್ತ ಉತ್ತರ ನೀಡಬೇಕಾಗಿದೆ ಎಂದು ಸದಸ್ಯರು ಜಿಲ್ಲಾಧಿಕಾರಿಗೆ ತಿಳಿಸಿದರು.

ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್ ಮಾತನಾಡಿ, ಈ ಸಭೆಗೆ ಬರಲು ಸಾಧ್ಯವಿಲ್ಲ ಎಂಬ ಬಗ್ಗೆ ಎಸ್‌ಪಿಯವರು ಲಿಖಿತವಾಗಿ ಮಾಹಿತಿ ಕೊಡಬೇಕಿತ್ತು. ಇದರಿಂದ ಸಭೆಯ ಗೌರವ ಉಳಿಯುತ್ತಿತ್ತು. ಆದರೆ ಸಭೆಗೆ ಯಾವುದೇ ಮಾಹಿತಿ ಕೊಡದೆ ಗೈರುಹಾಜರಾಗಿರುವುದು ಸರಿಯಲ್ಲ ಎಂದರು.

ಇದಕ್ಕೆ ಹಲವು ಸದಸ್ಯರು ಧ್ವನಿಗೂಡಿಸಿದರು. ಈ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಅಂತಿಮವಾಗಿ ಮರಳು ಉಸ್ತುವಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಎಂ. ಲೋಕೇಶ್ ಸಭೆಯಲ್ಲಿ ಉಪಸ್ಥಿತರಿದ್ದ ಕಾರಣದಿಂದ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಂ. ಲೋಕೇಶ್‌ರವರು, ’ಸದಸ್ಯರ ವ್ಯಕ್ತಪಡಿಸುವ ಅಭಿಪ್ರಾಯಗಳಿಗೆ ಹಾಗೂ ಸಮಸ್ಯೆಗಳನ್ನು ತಾವು ಪೊಲೀಸ್ ಇಲಾಖೆಗೆ ತಿಳಿಸಿ ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಪ್ರಾಮಾಣಿಕ ಕ್ರಮಕೈಗೊಳ್ಳುತ್ತೆನೆ’ ಎಂದು ಸದಸ್ಯರಿಗೆ ಭರವಸೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X