Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರದ ಸೌಲಭ್ಯ ದುರುಪಯೋಗವಾದರೆ ಕಠಿಣ...

ಸರ್ಕಾರದ ಸೌಲಭ್ಯ ದುರುಪಯೋಗವಾದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 July 2017 8:40 PM IST
share
ಸರ್ಕಾರದ ಸೌಲಭ್ಯ ದುರುಪಯೋಗವಾದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಮಡಿಕೇರಿ, ಜು.28: ಸರ್ಕಾರದಿಂದ ಎಲ್ಲಾ ವರ್ಗ ಜನಾಂಗದ ಬಡವರಿಗೂ ಒಂದಲ್ಲ ಒಂದು ರೀತಿಯ ಸೌಲಭ್ಯಗಳು ದೊರಕುತ್ತಿವೆ. ಆದರೆ ಈ ಸೌಲಭ್ಯವನ್ನು ಯಾವ ರೀತಿ ಬಳಸಿಕೊಂಡು ಅಭಿವೃದ್ಧಿ ಹೊಂದುತ್ತಿದ್ದಾರೆ ಅಥವಾ ದುರುಪಯೋಗವಾಗುತ್ತಿದೆಯೇ ಎನ್ನುವ ಬಗ್ಗೆ ಪರಿಶೀಲನೆ ಮಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ, ಐಟಿಡಿಪಿ, ಪಶುಪಾಲನೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹೀಗೆ ನಾನಾ ಇಲಾಖೆಗಳಿಂದ ಹಲವು ಸೌಲಭ್ಯ ಪಡೆಯುತ್ತಾರೆ. ಆದರೆ ಸೌಲಭ್ಯಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂಬ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆಯಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
   
ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಲವು ರೀತಿಯ ಪ್ರಯತ್ನಗಳು ನಡೆಯುತ್ತಲೇ ಬಂದಿವೆ. ಇದಕ್ಕಾಗಿ ಕೋಟ್ಯಾಂತರ ರೂ. ಖರ್ಚು ಮಾಡಲಾಗುತ್ತದೆ. ಆದರೆ ಇವು ಎಷ್ಟರ ಮಟ್ಟಿಗೆ ತಲುಪಿವೆ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಪಶುಭಾಗ್ಯ ಯೋಜನೆಯಡಿ ಹಸು, ಹಂದಿ, ಕೋಳಿ ಘಟಕ, ಮೀನುಮರಿ ವಿತರಣೆ, ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಯಾಣ ಕಾರ್ಯಕ್ರಮಗಳು, ವಿವಿಧ ಇಲಾಖೆಗಳಿಂದ ಸಹಾಯಧನ ಪಡೆದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು.
 
ಸೌಲಭ್ಯ ಪಡೆದವರು ಸ್ವತಃ ಬಳಸಿಕೊಳ್ಳುತ್ತಿದ್ದಾರೆಯೇ ಅಥವಾ ದುರುಪಯೋಗ ಪಡಿಸಿಕೊಂಡಿದ್ದಾರೆಯೇ ಎಂಬ ಬಗ್ಗೆ ತಿಳಿಯಬೇಕಿದೆ. ಜೊತೆಗೆ ದುರುಪಯೋಗ ಮಾಡಿಕೊಂಡಿರುವುದು ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯಲ್ಲಿ 2011 ರಿಂದ ಬಾಕಿ ಇರುವ ವಸತಿ, ರಸ್ತೆ, ಸಮುದಾಯ ಭವನ, ಕುಡಿಯುವ ನೀರು ಮತ್ತಿತರ ಕಾರ್ಯಕ್ರಮಗಳನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಜಿ.ಪಂ.ಎಂಜಿನಿಯರ್‌ಗಳಿಗೆ ತಿಳಿಸಿದರು.

ಹುಣಸೆ ಪಾರೆ, ಸಜ್ಜಳ್ಳಿ, ಕೂಪಾಡಿ, ಮಾಲಂಬಿ, ಕೆ.ಪೆರಾಜೆ, ಮೊಣ್ಣಂಗೇರಿ, ಮಂಗಳಪಾರೆ, ಯವಕಪಾಡಿ, ಕಾಡುಹಾಡಿ, ಹಣ್ಣಿನ ತೋಟ, ಅಂಚೆತಿಟ್ಟು, ಕಂಬಿಯಾರ ಭದ್ರಗೋಳ, ಬೊಗ್ಗನಹಡ್ಲು, ಒಳಗುಂದ, ದುಬಾರೆ, ಬೊಮ್ಮಾಡು, ಆಡಿನಾಡೂರು, ಸಿ.ಬಿ.ಹಳ್ಳಿ, ದೊಡ್ಡ ರೇಷ್ಮೆ ಹಡ್ಲು, ಚೊಟ್ಟೆಪಾರೆ, ಗೇಟ್ ಹಾಡಿ, ಮಾವಿನಹಳ್ಳ, ಕಟ್ಟೆಹಾಡಿ, ಮಜ್ಜಿಗೆಹಳ್ಳ, ಗೂಡ್ಲೂರು, ದೇವಮಚ್ಚಿ, ಕಿಬ್ಬೆಟ್ಟ, ಆನೆಪಂದಿ, ಕಟ್ಟೆಪಾಡಿ, ಯಲಕನೂರು, ಚೆನ್ನಂಗಿ ಬಸವನಹಳ್ಳಿ, ಕಬ್ಬಿನಗದ್ದೆ, ಹೈಸೊಡ್ಲೂರು, ಹೆರೂರು, ಬರಡಿ, ದೊಡ್ಡಚೇರಿ, ತನ್ನಿಮಾನಿ, ತಲೈಮಾರು, ರಂಗನಹಾಡಿ, ಅಂಬುಕೋಟೆ, ಅವರೆಗುಂದ, ಆಲಂದೋಡು, ಹಳ್ಳಿಗಟ್ಟು, ಚಂದನಕೆರೆ, ದೊಡ್ಡಬೆಟ್ಟಗೇರಿ ಈ ಹಾಡಿಗಳಲ್ಲಿ ಕುಡಿಯುವ ನೀರು, ರಸ್ತೆ ಡಾಂಬರೀಕರಣ, ಸಮುದಾಯ ಭವನ, ಕಿರು ಸೇತುವೆ ನಿರ್ಮಾಣ ಮತ್ತಿತರ ಕಾಮಗಾರಿಗಳು ನಡೆಯಬೇಕಿದೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಸಾಧಿಸದಿದ್ದರೆ ಬೇರೆ ಕಡೆಗೆ ಬದಲಾಯಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಹಾಗೆಯೇ ಬಸವನಹಳ್ಳಿ, ನಿಟ್ಟೂರು, ಕೋತೂರು, ಮರೂರು ಆಶ್ರಮ ಶಾಲೆಗಳಲ್ಲಿ ಹೆಚ್ಚುವರಿ ಕಟ್ಟಡ ಕಾಮಗಾರಿ ನಡೆಯಬೇಕಿದೆ. ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಚರ್ಚೆ ನಡೆಯಿತು.

ಜಿ.ಪಂ.ಯೋಜನಾ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಯಾದೇವಿ ಗಲಗಲಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಬಿ.ಆರ್.ಗಿರೀಶ್, ಜಿ.ಪಂ.ಎಂಜಿನಿಯರ್ ರಾಜ್ ಕುಮಾರ್ ರೆಡ್ಡಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X