Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ...

ಕಡಬ: ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ ತಹಶೀಲ್ದಾರ್

ನೆಟ್ಟಣದಲ್ಲಿ ಬಾರ್‌ಗಾಗಿ ಕಟ್ಟಡ ಆರೋಪ

ವಾರ್ತಾಭಾರತಿವಾರ್ತಾಭಾರತಿ28 July 2017 9:35 PM IST
share
ಕಡಬ: ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ ತಹಶೀಲ್ದಾರ್

ಕಡಬ, ಜು.28: ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಟ್ಟಣದ ಮರವಂಜಿ ಎಂಬಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡದಲ್ಲಿ ಮದ್ಯದಂಗಡಿ ತೆರಯಲು ತೆರೆಮರೆಯಲ್ಲಿ ಕಸರತ್ತು ನಡೆಸಲಾಗುತ್ತಿದೆ ಎನ್ನುವ ಸಾರ್ವಜನಿಕರ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿಯ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸ್ಥಳಕ್ಕಾಗಮಿಸಿದ ಕಡಬ ತಹಶೀಲ್ದಾರ್ ಅವರು ಕಟ್ಟಡ ಕಾಮಗಾರಿ ನಡೆಸದಂತೆ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನೆಟ್ಟಣದ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ಮದ್ಯದಂಗಡಿಯನ್ನು ತೆರವುಗೊಳಿಸಿ ಇದನ್ನು ಮರವಂಜಿಯಲ್ಲಿ ತೋಮ್ಸನ್ ಎಂಬವರು ತನ್ನ ಸ್ವಂತ ಜಾಗದಲ್ಲಿ ನಿರ್ಮಾಣ ಮಾಡುತ್ತಿರುವ ಕಟ್ಟಡದಲ್ಲಿ ಮರು ಸ್ಥಾಪಿಸುತ್ತಾರೆ ಎಂದು ಗ್ರಾಮಸ್ಥರು ತಹಶೀಲ್ದಾರ್ ರವರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಡಬ ವಿಶೇಷ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಅವರು ಸ್ಥಳಕ್ಕೆ ತೆರಳಿ ಕಾಮಗಾರಿಯನ್ನು ಸ್ಥಗಿತಗೊಳಿಸಿ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವಂತೆ ಸೂಚನೆ ನೀಡಿದರು.

ಶುಕ್ರವಾರ ಮಧ್ಯಾಹ್ನದ ವೇಳೆಗೆ ಬಿಳಿನೆಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿ ಪ್ರಸಾದ್ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿ ಬಂದಿದ್ದರು. ಸಂಜೆ ನಡೆದ ಬೆಳವಣಿಗೆಯಲ್ಲಿ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿದರು. ತಹಶೀಲ್ದಾರ್ ಆಗಮಿಸುತ್ತಿದ್ದಂತೆ ಬಾರ್ ವಿರೋಧಿಗಳು ನೂರಾರು ಜನ ಸ್ಥಳದಲ್ಲಿ ಜಮಾಯಿಸಿ ಕಟ್ಟಡ ನಿರ್ಮಾಣದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಸ್ಥಳಕ್ಕಾಗಮಿಸಿದ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಈ ಕಟ್ಟಡ ನಿರ್ಮಾಣ ಪರವಾನಿಗೆ ನೀಡಿಲ್ಲ. ಅರ್ಜಿ ಬಂದರೂ 60 ದಿನಗಳ ಕಾಲ ಅರ್ಜಿಯನ್ನು ವಿಲೇವಾರಿ ಮಾಡದೆ ಅದರ ಸಾಧಕ ಬಾಧಕಗಳನ್ನು ನೋಡಿಕೊಂಡು ಮತ್ತೆ ಪರವಾನಿಗೆ ನೀಡುವ ನಿಯಮಾವಳಿ ಇದೆ. ಈ ಕಟ್ಟಡದಲ್ಲಿ ಮದ್ಯದಂಗಡಿ ತೆರಯಲಾಗುತ್ತದೆ ಇದಕ್ಕೆ ಅನುಮತಿ ನೀಡಬಾರದು ಎಂದು ಪಂಚಾಯತ್ ಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಮಾತ್ರವಲ್ಲದೆ ಗ್ರಾಮ ಸಭೆಯಲ್ಲಿ ಕೂಡಾ ವಿರೋಧ ವ್ಯಕ್ತವಾಗಿದೆ. ಇದೇ ಹಿನ್ನೆಯಲ್ಲಿ ಕಟ್ಟಡ ನಿರ್ಮಿಸಬೇಡಿ ಎಂದು ಪಂಚಾಯತ್ ವತಿಯಿಂದ ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ತಹಶೀಲ್ದಾರ್ ಜಾನ್ ಪ್ರಕಾಶ್ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಯಲ್ಲಿ ಕಟ್ಟಡ ಕಾಮಗಾರಿ ಮುಂದುವರಿಸಬೇಡಿ ಎಂದು ಕಟ್ಟಡ ಮಾಲಕ ತೋಮ್ಸನ್ ಅವರಿಗೆ ಸೂಚಿಸಿದರು. ಅದಕ್ಕೆ ಉತ್ತರಿಸಿದ ಕಟ್ಟಡ ಮಾಲಕರು ನಾನು ನನ್ನ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯುವುದು ಸರಿಯಲ್ಲ. ಇದರಲ್ಲಿ ಕಮರ್ಶಿಯಲ್ ಉದ್ದೇಶವಿದ್ದು, ಬಾರ್ ಪ್ರಾರಂಭಿಸುವುದು ಬಿಡುವುದು ಆಮೇಲಿನ ವಿಚಾರ ಎಂದರು. ಇದರಿಂದ ಅಸಮಾಧಾನಗೊಂಡ ತಹಶೀಲ್ದಾರ್ ಕಟ್ಟಡಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ತರಿಸಿಕೊಂಡು ಭೂಪರಿವರ್ತನೆ ಪ್ರತಿ ಪಡೆದು ಇದನ್ನು ಕ್ಯಾನ್ಸಲ್ ಮಾಡುವಂತೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆಯವರಿಗೆ ಸೂಚಿಸಿದರು. ಕಟ್ಟಡ ಕಾಮಗಾರಿ ಮುಂದುವರಿಸಿದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಮೇಫಿ ಚೆರಿಯನ್, ಸದಸ್ಯ ಮನೋಜ್ ಕುಮಾರ್, ಮದ್ಯದಂಗಡಿ ವಿರೋಧಿ ಮುಖಂಡ ರಾಧಾಕೃಷ್ಣ, ಕಡಬ ಎ.ಎಸ್.ಐ ರವಿ, ಹೆಡ್ ಕಾನ್‌ಸ್ಟೇಬಲ್ ತಾರಾನಾಥ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X