ನಾಯಕನಾಗಿ ವಿದೇಶಿ ಟೆಸ್ಟ್‌ನಲ್ಲಿ 1000 ರನ್ ಪೂರೈಸಿದ ಕೊಹ್ಲಿ

ಗಾಲೆ, ಜು.28:ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ವಿದೇಶದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 1,000 ರನ್ ಪೂರ್ಣಗೊಳಿಸಿದ್ದಾರೆ. ಗಾಲೆ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ ಟೆಸ್ಟ್‌ನ ಮೂರನೆ ದಿನವಾಗಿರುವ ಶುಕ್ರವಾರ ಎರಡನೆ ಇನಿಂಗ್ಸ್‌ನಲ್ಲಿ ಅರ್ಧಶತಕ ದಾಖಲಿಸಿದ ಬೆನ್ನಲ್ಲೆ ಈ ಸಾಧನೆ ಮಾಡಿದರು.
ಕೊಹ್ಲಿ ಮೊದಲ ಇನಿಂಗ್ಸ್‌ನಲ್ಲಿ ಬೇಗನೆ ಔಟಾಗಿದ್ದರು. ಇಂದು 68 ಎಸೆತಗಳಲ್ಲಿ 4 ಬೌಂಡರಿಗಳ ಸಹಾಯದಿಂದ ಅರ್ಧಶತಕ ಪೂರ್ಣಗೊಳಿಸಿದರು. 58ನೆ ಟೆಸ್ಟ್ ಆಡುತ್ತಿರುವ ಅವರು 15ನೆ ಅರ್ಧಶತಕ ದಾಖಲಿಸಿದ್ದಾರೆ.
Next Story





