Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅರಮನೆ ಮೈದಾನದಲ್ಲಿ ಕೌಂಟರ್‌ಗಳ ಸ್ಥಾಪನೆ

ಅರಮನೆ ಮೈದಾನದಲ್ಲಿ ಕೌಂಟರ್‌ಗಳ ಸ್ಥಾಪನೆ

‘ತೆರಿಗೆ ಪಾವತಿಗೆ ಸದಾವಕಾಶ’

ವಾರ್ತಾಭಾರತಿವಾರ್ತಾಭಾರತಿ29 July 2017 6:34 PM IST
share
ಅರಮನೆ ಮೈದಾನದಲ್ಲಿ ಕೌಂಟರ್‌ಗಳ ಸ್ಥಾಪನೆ

ಬೆಂಗಳೂರು, ಜು.29: ಸಂಬಳ ಹಾಗೂ ಪಿಂಚಣಿ ಪಡೆಯುವ ತೆರಿಗೆದಾರರು ತೆರಿಗೆ ಪಾವತಿಸಲು ಅನುಕೂಲವಾಗುವಂತೆ ಆದಾಯ ತೆರಿಗೆ ಇಲಾಖೆಯು ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸ್ಥಾಪಿಸಿರುವ ಕೌಂಟರ್‌ಗಳನ್ನು ಶನಿವಾರ ಆದಾಯ ತೆರಿಗೆ ಇಲಾಖೆ(ಅಂತಾರಾಷ್ಟ್ರೀಯ ತೆರಿಗೆ)ಯ ಮುಖ್ಯ ಆಯುಕ್ತ ಅಶೋಕ್ ಕುಮಾರ್ ಸಿನ್ಹಾ ಉದ್ಘಾಟಿಸಿದರು.

ಜು.29 ರಿಂದ 31ರವರೆಗೆ ಒಟ್ಟು 106 ಕೌಂಟರ್‌ಗಳು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ತೆರೆದಿರುತ್ತವೆ. ತೆರಿಗೆ ಪಾವತಿ ಮಾಡುವುದರಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ, ಇಲ್ಲಿಗೆ ಬಂದು ಅವುಗಳನ್ನು ಇಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಭೌತಿಕ ಹಾಗೂ ಆನ್‌ಲೈನ್ ಮೂಲಕ ತೆರಿಗೆ ಪಾವತಿ ಮಾಡಲು ಅಗತ್ಯ ಮಾರ್ಗದರ್ಶನವನ್ನು ಆದಾಯ ತೆರಿಗೆ ಇಲಾಖೆ ನೀಡಲಿದೆ. ಹೆಚ್ಚಿನ ಪ್ರಮಾಣದಲ್ಲಿ ಆನ್‌ಲೈನ್ ಮೂಲಕವೆ ತೆರಿಗೆ ಪಾವತಿಸುವಂತೆ ಜನರನ್ನು ಪ್ರೋತ್ಸಾಹಿಸುವ ಕೆಲಸವನ್ನು ಆದಾಯ ತೆರಿಗೆ ಇಲಾಖೆ ಮಾಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಕೆ.ಮೇಘನಾಥ್ ಚೌವಾಣ್ ಮಾತನಾಡಿ, ಕೇಂದ್ರ, ರಾಜ್ಯ ಸರಕಾರಿ ನೌಕರರು ಹಾಗೂ ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು, ಪಿಂಚಣಿ ಪಡೆಯುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದರು.
ಪ್ರತಿವರ್ಷ ಜುಲೈ ತಿಂಗಳಲ್ಲಿ ಈ ರೀತಿಯ ಕಾರ್ಯಕ್ರಮವನ್ನು ಇಲಾಖೆ ಆಯೋಜನೆ ಮಾಡುತ್ತದೆ. ಕಳೆದ ವರ್ಷ ಸುಮಾರು 15 ಸಾವಿರ ಮಂದಿ ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆದಾಯ ತೆರಿಗೆಯನ್ನು ಪಾವತಿಸಿದ್ದಾರೆ. ಈ ವರ್ಷ ಈ ಪ್ರಮಾಣವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

2016-17ನೆ ಆರ್ಥಿಕ ವರ್ಷದಲ್ಲಿ ಕರ್ನಾಟಕ ಹಾಗೂ ಗೋವಾ ವಲಯದಲ್ಲಿ 1.04 ಲಕ್ಷ ಕೋಟಿ ರೂ.ತೆರಿಗೆ ಸಂಗ್ರಹಿಸಿದ್ದೇವೆ. ಪ್ರತಿ ವರ್ಷ ಜೂ.15, ಸೆ.15, ಡಿ.15 ಹಾಗೂ ಮಾ.15ರಂತೆ ನಾಲ್ಕು ಹಂತಗಳಲ್ಲಿ ಮುಂಗಡ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಮೇಘನಾಥ್ ಚೌವಾಣ್ ತಿಳಿಸಿದರು.

ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಮೊಬೈಲ್ ತಂಡಗಳನ್ನು ರಚಿಸಲಾಗಿದ್ದು, ಅವರು ಇಲ್ಲಿಗೆ ಬರುವಂತಹ ತೆರಿಗೆ ಪಾವತಿ ಮಾಡುವವರಿಗೆ ಅಗತ್ಯ ನೆರವನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X