ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣೆ
ಮಂಗಳೂರು, ಜು.29: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ಹಿರಿಯ ನಾಗರಿಕರಿಗೆ ಅವರ ಅವಶ್ಯಕತೆಗೆ ಅನುಸಾರವಾಗಿ ಕನ್ನಡಕ, ಅಡ್ಜಸ್ಟೇಬಲ್ ವಾಕಿಂಗ್ ಸ್ಟಿಕ್, ಟ್ರೈಪಾಡ್, ಶ್ರವಣಸಾಧನ, ವಾಕರ್ ಮುಂತಾದ ಸಾಧನ ಸಲಕರಣೆ ವಿತರಣೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಧನ ಸಲಕರಣೆ ಅವಶ್ಯಕತೆ ಇರುವ ಹಿರಿಯ ನಾಗರಿಕರು ಬಿಪಿಎಲ್ ಪಡಿತರ ಚೀಟಿ, ಜಿಲ್ಲೆಯಲ್ಲಿ ಕನಿಷ್ಠ 10 ವರ್ಷಗಳಿಂದ ವಾಸವಿರುವ ಬಗ್ಗೆ ಸಂಬಂಧಿತ ಪ್ರಾಧಿಕಾರದಿಂದ ದೃಢೀಕೃತ ಪ್ರಮಾಣ ಪತ್ರ, 2 ಪಾಸ್‌ಪೋರ್ಟ್ ಅಳತೆ ಭಾವಚಿತ್ರಗಳೊಂದಿಗೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ವೆನ್ಲಾಕ್ ಆಸ್ಪತ್ರೆಯಲ್ಲಿ ಆ.2ರಂದು ಬೆಳಗ್ಗೆ 9:30ರಿಂದ ಅಪರಾಹ್ನ 1 ಗಂಟೆಯ ವರೆಗೆ ನಡೆಯುವ ತಪಾಸಣಾ ಶಿಬಿರದಲ್ಲಿ ಭಾಗವಸಬಹುದು.
ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2458173, 2455999, 2422300 ಯನ್ನು ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಪ್ರಕಟನೆ ತಿಳಿಸಿದೆ.
Next Story





