ಭೀಮ್ ಸೇನೆಯ ಸ್ಥಾಪಕ ಚಂದ್ರಶೇಖರ್ ಮೇಲೆ ಜೈಲಿನಲ್ಲಿ ಹಲ್ಲೆ: ಆರೋಪ

ಲಕ್ನೊ, ಜು.29: ಭೀಮ್‌ಸೇನೆಯ ಸಂಸ್ಥಾಪಕ ಚಂದ್ರಶೇಖರ್ ಮೇಲೆ ಸಹಾರನ್‌ಪುರದ ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಬೀಮ್‌ಸೇನೆಯ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ಘೇರಾವ್ ಹಾಕಿದ ಭೀಮ್‌ಸೇನೆಯ ಕಾರ್ಯಕರ್ತರು, ಈ ಬಗ್ಗೆ ತಕ್ಷಣ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತಮ್ಮ ಬೇಡಿಕೆಯ ಬಗ್ಗೆ ತಕ್ಷಣ ಗಮನ ಹರಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದವರು ಹೇಳಿದ್ದಾರೆ. ಈ ಮಧ್ಯೆ ಹೇಳಿಕೆ ನೀಡಿರುವ ಭೀಮ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷರ ತಾಯಿ , ದಲಿತ ಸಂಘಟನೆಯ ಅಮಾಯಕ ಸದಸ್ಯರ ವಿರುದ್ಧ ಆಕ್ರಮಣ ನಡೆಸಿದರೆ ಸುಮ್ಮನಿರಲಾಗದು ಎಂದು ಎಚ್ಚರಿಸಿದ್ದಾರೆ.
ರಾಮ್‌ನಗರದಲ್ಲಿ ಮೇ 9ರಂದು ದಲಿತರು ಮತ್ತು ಠಾಕೂರ್ ಪಂಗಡದ ಜನರ ನಡುವೆ ನಡೆದಿದ್ದ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಭೀಮ್‌ಸೇನೆಯ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.
Next Story





