ಮಹಾದಾಯಿ, ವಿಪತ್ತು ಪರಿಹಾರ ನಿಧಿ: ಆ.5ಕ್ಕೆ ಮಹತ್ವದ ಸಭೆ

ಬೆಂಗಳೂರು, ಜು. 29: ಮಹಾದಾಯಿ ಮತ್ತು ವಿಪತ್ತು ಪರಿಹಾರ ನಿಧಿ ಹಂಚಿಕೆ ಸಂಬಂಧ ಉಭಯ ಸದನಗಳ ವಿಪಕ್ಷ ನಾಯಕರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರ ಸಭೆಯನ್ನು ಆಗಸ್ಟ್ 5ರ ಬೆಳಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವರಾದ ಸದಾನಂದಗೌಡ, ಅನಂತಕುಮಾರ್, ಸಂಸದರು, ಸಂಪುಟ ಸಚಿವರು ಸೇರಿದಂತೆ ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ ಜಿಲ್ಲೆಗಳ ಶಾಸಕರು ಪಾಲ್ಗೊಳ್ಳಲಿದ್ದಾರೆ.
ಕಳಸಾ-ಬಂಡೂರಿ ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಅವರ ಮಧ್ಯಸ್ಥಿಕೆ ವಹಿಸುವುದು ಹಾಗೂ ವಿಪತ್ತು ಪರಿಹಾರ ನಿಧಿ ವಿತರಣೆ ಸಂಬಂಧ ಕೇಂದ್ರ ರೂಪಿಸಿರುವ ಪರಿಷ್ಕೃತ ಮಾನದಂಡಗಳ ಬದಲಾವಣೆಗೆ ಆಗ್ರಹಿಸಿ ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಸಭೆ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





