ಜು.31: ಖಂಡನಾ ಸಭೆ
ಉಡುಪಿ, ಜು.29: ರಾಜ್ಯದಲ್ಲಿ ಸಂಘ ಪರಿವಾರ ಸಂಘಟನೆಗಳ ಪ್ರಮುಖರ ಮೇಲೆ ಸುಳ್ಳು ಕೇಸು ದಾಖಲಿಸಿ, ಅವರ ಮನೆಗಳ ಮೇಲೆ ಪೊಲೀಸ್ ಇಲಾಖೆ ದಾಳಿ ನಡೆಸುತ್ತಿರುವುದನ್ನು ಖಂಡಿಸಿ ಉಡುಪಿ ಜಿಲ್ಲೆಯ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ ವತಿಯಿಂದ ಜು.31ರಂದು ಚಿಟ್ಪಾಡಿ ಯಲ್ಲಿರುವ ಯು.ಎಸ್. ನಾಯಕ್ ಸಭಾ ಭವನದಲ್ಲಿ ಬೆಳಗ್ಗೆ 10:30ಕ್ಕೆ ಖಂಡನಾ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಸಂಘಪರಿವಾರದ ಪ್ರಮುಖರು ಮತ್ತು ವಿವಿಧ ಸಂಘಟನೆಗಳ ಕಾರ್ಯ ಕರ್ತರು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್ ಹಾಗೂ ಜಿಲ್ಲಾ ಬಜರಂಗದಳದ ಸಂಚಾಲಕ ದಿನೇಶ್ ಮೆಂಡನ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





