Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿಸಿ ಕಚೇರಿ ಮೇಲೆ ಕಲ್ಲು ತೂರಾಟ: ಲಘು...

ಡಿಸಿ ಕಚೇರಿ ಮೇಲೆ ಕಲ್ಲು ತೂರಾಟ: ಲಘು ಲಾಠಿ ಪ್ರಹಾರ

ಬಸವರಾಜ ದೇವರು ಸ್ವಾಮೀಜಿ ಮೇಲೆ ಪೊಲೀಸರ ಹಲ್ಲೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ29 July 2017 10:03 PM IST
share
ಡಿಸಿ ಕಚೇರಿ ಮೇಲೆ ಕಲ್ಲು ತೂರಾಟ: ಲಘು ಲಾಠಿ ಪ್ರಹಾರ

ಬಾಗಲಕೋಟೆ, ಜು. 29: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರಿಸಬೇಕೆಂದು ಆಗ್ರಹಿಸಿ ರ‍್ಯಾಲಿ ಮೂಲಕ ಮನವಿ ಸಲ್ಲಿಸಲು ತೆರಳಿದ್ದ ವೇಳೆ ಕಚೇರಿಯಲ್ಲಿ ಜಿಲ್ಲಾಧಿಕಾರಿ ಇಲ್ಲದ್ದರಿಂದ ಪ್ರತಿಭಟನಾಕಾರರು ಡಿಸಿ ಕಚೇರಿಯ ಕಿಟಕಿ ಗಾಜುಗಳನ್ನು ಪುಡಿ ಮಾಡಿ, ಕಚೇರಿ ನಾಮಫಲಕವನ್ನು ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಮಾಜಿ ಸಂಸದ ಎಚ್.ವಿಶ್ವನಾಥ್, ಧಾರವಾಡದ ರೇವಣ್ಣ ಸಿದ್ದೇಶ್ವರ ಮಠದ ಬಸವರಾಜ ದೇವರು ಸ್ವಾಮೀಜಿ ನೇತೃತ್ವದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಕುರುಬರ ಸಂಘದ ಆಶ್ರಯದಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಮನವಿ ಸಲ್ಲಿಸಲು ತೆರಳಿದ್ದ ವೇಳೆ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ್ ಇರಲಿಲ್ಲ. ಹೀಗಾಗಿ ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಯ ಕಿಟಕಿ ಗಾಜುಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಅಲ್ಲದೆ, ಕಚೇರಿಯ ನಾಮಫಲಕ ಕಿತ್ತೆಸೆದು, ಜಿಲ್ಲಾಧಿಕಾರಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಈ ಹಂತದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ತೀವ್ರ ವಾಗ್ವಾದ, ಮಾತಿನ ಚಕಮಕಿ ನಡೆಯಿತು. ಇದೇ ಸಂದರ್ಭದಲ್ಲಿ ಅಲ್ಲೆ ಇದ್ದ ಮೇಜಿನ ಮೇಲೆರಿದ ಬಸವರಾಜ ದೇವರು ಸ್ವಾಮೀಜಿ, ಭಾಷಣ ಮಾಡಲು ಮುಂದಾದರು. ಇದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡು ಸ್ಥಳದಲ್ಲಿ ಕಾವೇರಿದ ವಾತಾವರಣ ಸೃಷ್ಟಿಯಾಯಿತು. ಈ ಹಂತದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಈ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು, ಗೊಂದಲ ಹಿನ್ನೆಲೆಯಲ್ಲಿ ರೇವಣ್ಣ ಸಿದ್ದೇಶ್ವರ ಮಠದ ಶ್ರೀ ಬವಸರಾಜ ದೇವರು ಸ್ವಾಮೀಜಿ ಅಸ್ವಸ್ಥಕೊಂಡು ಸ್ಥಳದಲ್ಲೆ ಕುಸಿದು ಬಿದ್ದರು. ಕೂಡಲೇ ಭಕ್ತರು ಅವರನ್ನು ಹೊರಗೆ ಕರೆತಂದು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಶ್ರೀಗಳ ಆರೋಗ್ಯ ಸುಸ್ಥಿತಿಯಲ್ಲಿದ್ದು, ನೂಕುನುಗ್ಗಲಿನ ಹಿನ್ನೆಲೆಯಲ್ಲಿ ಅವರಿಗೆ ಸಣ್ಣ-ಪುಟ್ಟ ಗಾಯಗಾಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.

ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುವ ಮಾಹಿತಿ ಇದ್ದರೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಜರಿಲ್ಲದ ಕಾರಣ ಉದ್ರಿಕ್ತರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಪೊಲೀಸರು ವಿನಾಕಾರಣ ಬಸವರಾಜ ದೇವರು ಶ್ರೀಗಳು ಹಾಗೂ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X