ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
_0.jpg)
ಬೆಂಗಳೂರು, ಜು.30: ಶಾಲಾ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿನ ಪುಲಕೇಶಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಕೆಎಂಎಸ್ ರಸ್ತೆಯ ಅಫ್ಜಲ್ ಹುಸೇನ್(33) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿ ಅಫ್ಜಲ್, ನಗರದಲ್ಲಿ ಬಿಲ್ಡರ್ ಆಗಿ ಕೆಲಸ ಮಾಡುತ್ತಿದ್ದು, ಒಂದು ವರ್ಷದ ಹಿಂದೆ ಹತ್ತನೆ ತರಗತಿಯ ಬಾಲಕಿಯೋರ್ವಳನ್ನು ಪರಿಚಯಿಸಿಕೊಂಡಿದ್ದ. ಜತೆಗೆ ಬಾಲಕಿಯೂ ಆತನೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಕಳೆದ ಒಂದು ತಿಂಗಳಿನಿಂದ ಆರೋಪಿಯು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಲ್ಲದೆ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎನ್ನಲಾಗಿದ್ದು, ಬಾಲಕಿ ಜು.28ರಂದು ಈ ವಿಚಾರವನ್ನು ಪೋಷಕರ ಗಮನಕ್ಕೆ ತಂದಿದ್ದಳು.ಬಳಿಕ ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ.







