‘ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅಧ್ಯಯನಕ್ಕೆ ಬಳಸಿಕೊಳ್ಳಲಿ’

ಶಿರ್ವ, ಜು.30: ಬಂಟಕಲ್ ಶ್ರೀಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್‌ಮೆಂಟ್‌ನ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿ ಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮವು ರವಿವಾರ ವಿದ್ಯಾಲಯದ ಆವರಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಬೆಂಗಳೂರು ಎಸ್‌ಎಪಿ ಲ್ಯಾಬ್ಸ್‌ನ ಉಪಾಧ್ಯಕ್ಷ ಅರುಣ್ ಸುಬ್ರಹ್ಮಣ್ಯನ್ ಮಾತನಾಡಿ, ವಿದ್ಯಾರ್ಥಿ ಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಕ್ರಿಯಾತ್ಮಕವಾಗಿ ತಮ್ಮ ಅಧ್ಯಯನ ಹಾಗೂ ಕೆಲಸಗಳಲ್ಲಿ ಬಳಸಿಕೊಳ್ಳ ಬೇಕು ಎಂದು ಹೇಳಿದರು.
ಮಣಿಪಾಲದ ನಿವೃತ್ತ ಸಹನಿರ್ದೇಶಕ ಪ್ರೊ.ಎಚ್.ಕೆ.ವಿಶ್ವನಾಥ್ ರಾವ್ ಮಾತ ನಾಡಿದರು. ಅಧ್ಯಕ್ಷತೆಯನ್ನು ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್ ಉಪಾಧ್ಯಾಕ್ಷ ಶ್ರೀನಿವಾಸ ತಂತ್ರಿ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್ ಶುಭಹಾರೈಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ.ಡಾ.ತಿರುಮಲೇಶ್ವರ ಭಟ್, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರೀನ ಕುಮಾರಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಲೊಲಿಟ ಪ್ರಿಯ ಕ್ಯಾಸ್ತಲಿನೊ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರಥಮ ವರ್ಷಕ್ಕೆ ಸೇರ್ಪಡೆಗೊಂಡ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಸುಧೀರ್ ಸ್ವಾಗತಿಸಿದರು. ಪ್ರಾಧ್ಯಾಪಕ ಚೇತನ್ ಆರ್. ವಂದಿಸಿದರು. ಸೌಮ್ಯ ಭಟ್ ಮತ್ತು ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿದರು.







