ಆ.5: ಎಂಡೋಸಲ್ಫಾನ್ ಸಂತ್ರಸ್ತರ ತಪಾಸಣೆ
ಮಂಗಳೂರು ಜು.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ. ಮಂಗಳೂರು ಮತ್ತು ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆ.5 ರಂದು ಪೂರ್ವಾಹ್ನ 10 ರಿಂದ 1 ಗಂಟೆವರೆಗೆ ರವರೆಗೆ ಮೂಡಬಿದ್ರೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಗುರುತಿಸುವಿಕೆ ಹಾಗೂ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಸಂಭವನೀಯ ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆಗೊಳಪಟ್ಟು ಸರಕಾರದಿಂದ ಸಿಗುವ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.
Next Story





