ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು; ಸಹಸವಾರನಿಗೆ ಗಾಯ

ವಿಟ್ಲ, ಜು. 30: ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಸಂಭವಿಸಿದೆ.
ಬೆಳ್ತಂಗಡಿಯ ಕರಾಯ ಬದಿಯಾರು ನಿವಾಸಿ ಜಾಫರ್ ಶರೀಫ್ (24) ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬೆಳ್ತಂಗಡಿಯ ಪುತ್ತಿಲ ನಿವಾಸಿ ಮುಹಮ್ಮದ್ ಇರ್ಷಾದ್ (21) ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರು ಬೈಕ್ ನಲ್ಲಿ ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





