ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
ಕಡಬ, ಜು.30: ಪಂಜ ರಸ್ತೆಯ ಕಡಬ ಸಮುದಾಯ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಬೈಕೊಂದು ಢಿಕ್ಕಿಯಾದ ಪರಿಣಾಮ ಪಾದಚಾರಿ ವೃದ್ಧ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ಮೃತರನ್ನು ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ದೇವಪ್ಪ ಗೌಡ ಎಂದು ಗುರುತಿಸಲಾಗಿದೆ. ಅವರು ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪಂಜ ಕಡೆಗೆ ತೆರಳುತ್ತಿದ್ದ ಬೈಕೊಂದು ಢಿಕ್ಕಿ ಹೊಡೆದುದರಿಂದ ಗಾಯ ಗೊಂಡು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





