Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.1ರಿಂದ ಆಳ ಸಮುದ್ರ ಮೀನುಗಾರಿಕೆ

ಆ.1ರಿಂದ ಆಳ ಸಮುದ್ರ ಮೀನುಗಾರಿಕೆ

ವಾರ್ತಾಭಾರತಿವಾರ್ತಾಭಾರತಿ31 July 2017 9:16 PM IST
share

ಮಂಗಳೂರು, ಜು.31: ಎರಡು ತಿಂಗಳ ಮೀನುಗಾರಿಕಾ ನಿಷೇಧದ ಬಳಿಕ ಕರಾವಳಿಯ ಮೀನುಗಾರರು ಆ.1ರಿಂದ ಆಳಸಮುದ್ರ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಮಳೆಗಾಲದ ಆರಂಭ ಕಾಲವಾದ ಜೂ.1ರಿಂದ ಜು.31ರವರೆಗೆ ಕಡಲ ಮೀನುಗಳ ಸಂತಾನಾಭಿವೃದ್ಧಿಯ ಕಾಲವಾಗಿದ್ದು, ಪ್ರತಿ ವರ್ಷ ಈ ಅವಧಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ಕಡ್ಡಾಯ ನಿಷೇಧ ಹೇರಲಾಗುತ್ತದೆ. ಅದರಂತೆ ಈ ವರ್ಷವೂ ಜು.31ಕ್ಕೆ ನಿಷೇಧದ ಅವಧಿ ಮುಗಿಯಲಿದ್ದು, ಆ.1ರಂದು ಸಮುದ್ರ ಪೂಜೆ ಸಲ್ಲಿಸಿ ಮೀನುಗಾರರು ಕಡಲಿಗೆ ಇಳಿಯಲಿದ್ದಾರೆ.

ಜಿಲ್ಲೆಯಲ್ಲಿ 950ರಷ್ಟು ದೊಡ್ಡ ಮಟ್ಟದ ಯಾಂತ್ರೀಕೃತ ಸಹಿತ ಸಣ್ಣ, ಮಧ್ಯಮ ವರ್ಗದ 2 ಸಾವಿರ ಬೋಟ್‌ಗಳಿವೆ. 55 ಪರ್ಸೀನ್ ಬೋಟ್‌ಗಳಿವೆ. ಇವೆಲ್ಲವುಗಳಿಗೂ ಆ.1ರಿಂದ ಕಡಲಿಗಿಳಿಯಲು ಅನುಮತಿ ಮುಕ್ತವಾಗಿದೆ. ಸಬ್ಸಿಡಿ ಡೀಸೆಲ್‌ಗಾಗಿ ಪಾಸ್‌ಬುಕ್‌ಗಳನ್ನು ನೀಡಲಾಗುತ್ತಿದ್ದು, ಆ.1ರಿಂದಲೇ ಡೀಸೆಲ್ ವಿತರಣೆ ಮಾಡಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ.

ಸೀಮೆಎಣ್ಣೆ ಸಬ್ಸಿಡಿ ಖಾತೆಗೆ ಜಮಾ: ಗಿಲ್‌ನೋಟ್ ಸಂಘ ವಿರೋದ

ನಾಡದೋಣಿ ಮೀನುಗಾರರಿಗೆ ನೀಡಲಾಗುವ ಸೀಮೆಎಣ್ಣೆ ಸಬ್ಸಿಡಿ ಮೊತ್ತ ಸೆಪ್ಟೆಂಬರ್ ತಿಂಗಳ ಬಳಿಕ ನೇರವಾಗಿ ಮೀನುಗಾರರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ. ಆದರೆ ಇದಕ್ಕೆ ಗಿಲ್‌ನೆಟ್ ಮೀನುಗಾರರ ಸಂಘ ವಿರೋಧ ವ್ಯಕ್ತಪಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿದ ಸಂಘದ ಅಧ್ಯಕ್ಷ ಅಲಿ ಹಸನ್, ಸರಕಾರದ ಈ ನಿರ್ಧಾರದಿಂದ ಮೀನುಗಾರರಿಗೆ ತುಂಬಾ ಹೊಡೆತ ನೀಡಲಿದೆ. ಇದರಿಂದ ಮೀನುಗಾರರು, ಮೀನು ವ್ಯಾಪಾರಿಗಳು ಬದುಕು ಸಾಗಿಸಲು ಕಷ್ಟವಿದೆ. ಈ ಬಗ್ಗೆ ಈಗಾಗಲೆ ಸಂಘದ ಸದಸ್ಯರು ಚರ್ಚೆ ನಡೆಸಿದ್ದು, ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಅದಕ್ಕೂ ಮೊದಲು ವಸ್ತುಸ್ಥಿತಿ ವಿವರಿಸಲು ಮೀನುಗಾರಿಕಾ ಸಚಿವರನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಸರಕಾರವು ಪ್ರತಿ ಲೀಟರ್ ಸೀಮೆಎಣ್ಣೆಯನ್ನು 56 ರೂ.ಗೆ ಖರೀದಿಸಿ ಪ್ರತಿ ಲೀಟರ್‌ಗೆ 33 ರೂ.ನಂತೆ ಮೀನು ಗಾರರಿಗೆ ವಿತರಿಸುತ್ತದೆ. ಸೆಪ್ಟೆಂಬರ್‌ನಿಂದ ಮೇ ತಿಂಗಳವರೆಗೆ ಈ ಸಬ್ಸಿಡಿ ಸೀಮೆಎಣ್ಣೆ ವಿತರಣೆಯಾಗುತ್ತದೆ. ಈ ವರ್ಷ ದಿಂದ ಸಬ್ಸಿಡಿ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವ ಹೊಸ ನಿಯಮವನ್ನು ಜಾರಿಗೊಳಿಸಲು ಸರಕಾರ ಮುಂದಾಗಿದೆ. ಇದು ಸಂಪೂರ್ಣವಾಗಿ ಜಾರಿಯಾದರೆ ಈಗ ಅಡುಗೆ ಅನಿಲ ಸಬ್ಸಿಡಿ ಮೊತ್ತ ಪಾವತಿಯಂತೆಯೇ ಈ ಪ್ರಕ್ರಿಯೆಯೂ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X