ಸ್ವಂತ ಉದ್ಯೋಗ : ಮಹಿಳೆಯರಿಂದ ಅರ್ಜಿ ಆಹ್ವಾನ
ಮಂಗಳೂರು, ಆ.1: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿಂದ ಗರಿಷ್ಟ ರೂ. 1 ಲಕ್ಷ ಸಾಲ ಪಡೆದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷ ವಯೋಮಿತಿಯ ಹಾಗೂ ಕುಟುಂಬದ ವಾರ್ಷಿಕ ಆದಾಯ 40,000 ರೂ. ಗೆ ಮೀರದ ಮಹಿಳೆಯರು ಆ.31ರೊಳಗೆ ತ್ರಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿಯಿರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಪಂ ಕಟ್ಟಡ, ಕೊಟ್ಟಾರ, ಮಂಗಳೂರು, ಇವರನ್ನು (ದೂ.ಸಂ: 0824-2458173)ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





