ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆ.1: ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಅಮಿತ್‌ಪೌಲ್ ಅವರನ್ನು ಸೆಂಟ್ರಲ್ ರೆಂಜ್ ಐಜಿಪಿಯಾಗಿ, ಸೀಮಂತ್ ಕುಮಾರ್ ಸಿಂಗ್ ಅವರನ್ನು ಐಜಿಪಿ ಪೂರ್ವ ಬೆಂಗಳೂರು ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಹಾಗೂ ಎಂ.ಎನ್.ನಾಗರಾಜ್ ಅವರನ್ನು ಧಾರವಾಡ-ಹುಬ್ಬಳ್ಳಿ ಪೊಲೀಸ್ ಆಯುಕ್ತರಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





