ಕೆರೆಗೆ ಬಿದ್ದ ವ್ಯಕ್ತಿಯ ಮೃತ್ಯು
ಹೊನ್ನಾವರ, ಆ. 1: ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಶೆಟ್ಟಿಕೆರೆಯಲ್ಲಿ ಮಂಗಳವಾರ ನಡೆದಿದೆ.
ಉಡುಪಿಯ ಬಾರ್ಕೂರು ನಿವಾಸಿ ಶಿವಪ್ರಸಾದ ಮಾಧವ ಪೂಜಾರಿ (35) ಮೃತರು ಎಂದು ಗುರುತಿಸಲಾಗಿದೆ.
ಮಂಗಳವಾರ ಶೆಟ್ಟಿಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‌ಐ ಆನಂದಮೂರ್ತಿ ಹಾಗೂ ಸಿಬ್ಬಂದಿ ಘಟನೆಯ ಕುರಿತು ಪರಿಶೀಲನೆ ನಡೆಸಿದ್ದು, ಶಿವಪ್ರಸಾದ್ ಮಾನಸಿಕ ಅಸ್ವಸ್ಥನಾಗಿದ್ದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದು, ಅಲ್ಲದೇ ‘ತನ್ನ ಸಾವಿಗೆ ತಾನೇ ಕಾರಣ’ ಎಂದು ತನ್ನ ಬ್ಯಾಗ್‌ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





