Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರವರೆಗೆ ಅಗ್ಗ ಬೆಲೆಯಲ್ಲೇ ದೊರಕಲಿದೆ...

2018ರವರೆಗೆ ಅಗ್ಗ ಬೆಲೆಯಲ್ಲೇ ದೊರಕಲಿದೆ ಅಕ್ಕಿ, ಗೋಧಿ

ವಾರ್ತಾಭಾರತಿವಾರ್ತಾಭಾರತಿ1 Aug 2017 8:29 PM IST
share
2018ರವರೆಗೆ ಅಗ್ಗ ಬೆಲೆಯಲ್ಲೇ ದೊರಕಲಿದೆ ಅಕ್ಕಿ, ಗೋಧಿ

ಹೊಸದಿಲ್ಲಿ,ಆ.1: ದೇಶದ 81 ಕೋಟಿ ಜನರಿಗೆ ಪ್ರತಿ ಕೆಜಿಗೆ 2 ರೂ. ಮತ್ತು 3 ರೂ.ನಂತೆ ಒದಗಿಸಲಾಗುತ್ತಿರುವ ಗೋಧಿ ಮತ್ತು ಅಕ್ಕಿಯ ಸಬ್ಸಿಡಿ ಬೆಲೆಗಳನ್ನು 2018ರವರೆಗೂ ಪರಿಷ್ಕರಿಸುವುದಿಲ್ಲ ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ ವಿಲಾಸ್ ಪಾಸ್ವಾನ್ ಅವರು ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು.

ಆಹಾರ ಧಾನ್ಯಗಳ ಬೆಲೆಗಳನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಪರಿಷ್ಕರಿಸಲು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ,2013ರಲ್ಲಿ ಅವಕಾಶವಿದೆ. ಆದರೆ ಪ್ರಸಕ್ತ ಯೋಜನೆಯನ್ನು 2018ರವರೆಗೆ ಮುಂದುವರಿಸಲು ಸರಕಾರವು ನಿರ್ಧರಿಸಿದೆ ಎಂದರು.

ಯೋಜನೆಯಡಿ ಪ್ರತಿ ಕೆ.ಜಿ.ಗೋಧಿಯನ್ನು ಎರಡು ರೂ.ಗೆ, ಅಕ್ಕಿಯನ್ನು ಮೂರು ರೂ.ಗೆ ಮತ್ತು ಒರಟು ಧಾನ್ಯಗಳನ್ನು ಒಂದು ರೂ.ಗೆ ಒದಗಿಸಲಾಗುತ್ತದೆ. ಯಾರೂ ಹಸಿವೆಯಿಂದಿರದಂತೆ ನೋಡಿಕೊಳ್ಳುವುದು ರಾಜ್ಯ ಸರಕಾರಗಳ ಹೊಣೆಗಾರಿಕೆಯಾಗಿದೆ ಮತ್ತು ಯೋಜನೆಯನ್ನು ಸೂಕ್ತವಾಗಿ ಜಾರಿಗೊಳಿಸಲು ಕೇಂದ್ರವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪಾಸ್ವಾನ್ ಹೇಳಿದರು.

ದೇಶದ ದಾಸ್ತಾನು ಸಾಮರ್ಥ್ಯವನ್ನು ಹೆಚ್ಚಿಸಲು ಖಾಸಗಿ ಉದ್ಯಮಿಗಳು, ಕೇಂದ್ರಿಯ ಗೋದಾಮು ನಿಗಮ(ಸಿಡಬ್ಲುಸಿ)ಮತ್ತು ರಾಜ್ಯ ಸರಕಾರಿ ಏಜೆನ್ಸಿಗಳ ಮೂಲಕ ದಾಸ್ತಾನು ಸಾಮರ್ಥ್ಯ ನಿರ್ಮಾಣಕ್ಕಾಗಿ ಸರಕಾರವು 2008-09ರಲ್ಲಿ ಖಾಸಗಿ ಉದ್ಯಮಿಗಳ ಖಾತರಿ ಯೋಜನೆ(ಪಿಇಜಿ)ಯನ್ನು ರೂಪಿಸಿತ್ತು ಎಂದು ಹೇಳಿದರು.

ಈ ಯೋಜನೆಯಡಿ ಖಾಸಗಿ ಹೂಡಿಕೆದಾರರು ಅಥವಾ ರಾಜ್ಯ ಏಜೆನ್ಸಿಗಳು ಹೂಡಿಕೆ ಮತ್ತು ನಿರ್ಮಾಣವನ್ನು ಮಾಡುತ್ತಿದ್ದು, ಇದಕ್ಕೆ ಪ್ರತಿಯಾಗಿ ಖಾಸಗಿ ವ್ಯಕ್ತಿಗಳು ನಿರ್ಮಿಸಿದ ಗೋದಾಮನ್ನು 10 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆದುಕೊಳ್ಳುವ ಖಾತರಿಯನ್ನು ಭಾರತೀಯ ಆಹಾರ ನಿಗಮ(ಎಫ್‌ಸಿಐ)ವು ನೀಡುತ್ತದೆ. ಸಿಡಬ್ಲುಸಿ ಅಥವಾ ರಾಜ್ಯ ಸರಕಾರಿ ಏಜೆನ್ಸಿಗಳಿಗೆ ಈ ಖಾತರಿಯು ಒಂಭತ್ತು ವರ್ಷ ಅವಧಿಯದಾಗಿರುತ್ತದೆ ಎಂದು ಪಾಸ್ವಾನ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮದಂತೆ ಎಫ್‌ಸಿಐ ನೌಕರರು ಈಗ ಪಿಂಚಣಿ ಮತ್ತು ನಿವೃತ್ತಿ ನಂತರದ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುತ್ತಾರೆ ಎಂದೂ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X