ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

ಹೊನ್ನಾವರ, ಆ.1: ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ಸಾರ್ವಜನಿಕರನ್ನು ಭಯ ಭೀತರನ್ನಾಗಿಸಿತು.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಮಹಾರಾಷ್ಟ್ರದ ಸೂರತ್‌ಗೆ ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು, ಚಾಲಕ ಗಾಯ ಗೊಂಡಿದ್ದಾನೆ. ಟ್ಯಾಂಕರ್ ಪಲ್ಟಿಯಾದ ಸುದ್ದಿ ತಿಳಿದ ತಕ್ಷಣ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡರು.
Next Story





