Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯರ ಜ್ವಲಂತ ಸಮಸ್ಯೆಗಳು ಈಗಲೂ...

ಮಹಿಳೆಯರ ಜ್ವಲಂತ ಸಮಸ್ಯೆಗಳು ಈಗಲೂ ಜೀವಂತ: ಡಾ.ನಾಗರತ್ನ

ವಾರ್ತಾಭಾರತಿವಾರ್ತಾಭಾರತಿ1 Aug 2017 9:50 PM IST
share
ಮಹಿಳೆಯರ ಜ್ವಲಂತ ಸಮಸ್ಯೆಗಳು ಈಗಲೂ ಜೀವಂತ: ಡಾ.ನಾಗರತ್ನ

ಉಡುಪಿ, ಆ.1: ಮಹಿಳೆಯರ ಕೆಲವೊಂದು ಜ್ವಲಂತ ಸಮಸ್ಯೆಗಳು ಈಗಲೂ ಜೀವಂತವಾಗಿವೆ. ಉಡುಪಿ ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಲ್ಲಿ ಈಗಲೂ ಬಾಲ್ಯ ವಿವಾಹಗಳು ನಡೆಯುತ್ತಿವೆ. ಸ್ವಾತಂತ್ರ ಪೂರ್ವದಲ್ಲಿದ್ದ ಸಾಮಾಜಿಕ ಪಿಡುಗುಗಳು ಇಂದಿಗೂ ಸಂಪೂರ್ಣ ನಿರ್ಮೂಲನೆಆಗಿಲ್ಲ ಎಂದು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಶಾಸ್ತ್ರಿ ಹೇಳಿದ್ದಾರೆ.

ಉಡುಪಿಯ ಪವರ್ ಸಂಸ್ಥೆಯ ಆಶ್ರಯದಲ್ಲಿ ಮಹಿಳಾ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದಲ್ಲಿ ಮಂಗಳವಾರ ಸಂಘದ ಹಾಲ್‌ನಲ್ಲಿ ಜರಗಿದ ‘ಓರಲ್ ಹೈಜೀನ್ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲೆಯಲ್ಲಿ 0-6ವರ್ಷದೊಳಗಿನ ಮಕ್ಕಳ ಲಿಂಗ ಅನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ. ಭ್ರೂಣ ಹತ್ಯೆಯು ವೈದ್ಯಕೀಯ ಸಮಸ್ಯೆ ಅಲ್ಲ. ಅದು ಸಾಮಾಜಿಕ ಪಿಡುಗು ಆಗಿದೆ. ಇದನ್ನು ಕೇವಲ ಕಾನೂನುಗಳಿಂದ ತಡೆಯಲು ಆಗುವುದಿಲ್ಲ. ಜನರ ಮನೋಭಾವನೆ ಬದಲಾಗಬೇಕು ಎಂದು ಅವರು ತಿಳಿಸಿದರು.

ಮಹಿಳಾ ಸಬಲೀಕರಣ ಅಂದರೆ ಮಹಿಳೆಯರು ದುಡಿಯುವುದು ಮಾತ್ರ ವಲ್ಲ. ಆಕೆಗೆ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಯಾವಾಗ ಸಿಗುತ್ತದೆಯೋ ಅದುವೇ ನಿಜವಾದ ಮಹಿಳಾ ಸಬಲೀಕರಣ ಎಂದು ಅವರು ಅಭಿಪ್ರಾಯ ಪಟ್ಟರು. ರಾಜ್ಯ ಸರಕಾರ ಬಿಪಿಎಲ್ ಕುಟುಂಬಗಳ 45ವರ್ಷಗಳಿಂತ ಮೇಲ್ಪಟ್ಟವರಿಗೆ ದಂತ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆ ಸರಕಾರಿ ಮಾತ್ರವಲ್ಲದೆ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲೂ ಲಭ್ಯ ಇದೆ. ಈ ಯೋಜನೆಯಲ್ಲಿ ಪೂರ್ತಿ ಹಲ್ಲಿನ ಸೆಟ್‌ಗಳನ್ನು ಅಳವಡಿಸುವುದು ಮಾತ್ರವಲ್ಲದೆ ಎರಡು ಮೂರು ಹಲ್ಲುಗಳನ್ನು ಜೋಡಿಸುವ ಕೆಲಸ ಮಾಡಲಾಗುತ್ತದೆ. ಸರಕಾರಿ ಆಸ್ಪತ್ರೆಗಳಲ್ಲಿ ಇಂದು ದಂತ ವೈದ್ಯರ ಕೊರತೆ ಸಾಕಷ್ಟು ಇದೆ ಎಂದರು.

ಇಂಡಿಯನ್ ಡೆಂಟಲ್ ಅಸೋಸಿಯೇಶನ್ ಉಡುಪಿ ಶಾಖೆಯ ಅಧ್ಯಕ್ಷ ಡಾ.ವಿಜಯೇಂದ್ರ ವಸಂತ ರಾವ್ ಮಾತನಾಡಿದರು. ಪವರ್ ಅಧ್ಯಕ್ಷೆ ಡಾ. ಗಾಯತ್ರಿ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ತಾರಾ ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಕಾರಿ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಭಂಡಾರಿ ಸ್ವಾಗತಿಸಿದರು. ಯಶೋಧಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X