ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಆ.1: ಈ ಬಾರಿ ನಡೆಯಲಿರುವ ಅಂತಾರಾಷ್ಟೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2016-17ನೇ ಸಾಲಿಗೆ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಉಡುಪಿ ಜಿಲ್ಲೆಯಿಂದ ಕಳೆದ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳು, ಅರ್ಹ ವ್ಯಕ್ತಿಗಳಿಗೆ ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಂದ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಹರಾದ ಮಹಿಳೆಯರಿಂದ ಪ್ರಸ್ತಾವನೆಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳೆಯರು ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಕೊಠಡಿ ಸಂಖ್ಯೆ 204, ಮೊದಲನೆ ಮಹಡಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸ ಲಾಗಿದೆ.
Next Story





