ಗಾಂಜಾ ಮಾರಾಟ ಆರೋಪಿ ಬಂಧನ
ಮಂಗಳೂರು, ಆ. 1: ಕಂಕನಾಡಿ ರೈಲ್ವೇ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕದ್ರಿ ಟೋಲ್‌ಗೇಟ್ ನಿವಾಸಿ ಸೂರಜ್ ಎಸ್.ಕುಮಾರ್ (33) ಎಂಬಾತನನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತನಿಂದ 150 ಗ್ರಾಂ ಗಾಂಜಾ ಹಾಗೂ ಮಾರಾಟಕ್ಕೆ ಉಪಯೋಗಿಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೈಲ್ವೇ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





