ಕಾವ್ಯಾ ಸಾವಿನ ತನಿಖೆಗೆ ಜನವಾದಿ ಸಂಘಟನೆ ಒತ್ತಾಯ

ಮಂಗಳೂರು, ಆ. 1: ಮೂಡುಬಿದಿರೆ ಆಳ್ವಾಸ್ ಸಂಸ್ಧೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಕಾವ್ಯಾಳ ಅನುಮಾನಸ್ಪದ ಸಾವಿನ ಬಗ್ಗೆ ಕೂಲಂಕುಷ ತನಿಖೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಕಾವ್ಯಾ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾಗಿರುವುದು ಈ ಜಿಲ್ಲೆಯ ವಿದ್ಯಾರ್ಥಿ ಸಮುದಾಯ ಮತ್ತು ಅವರ ರಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಆಕೆಯ ಹೆತ್ತವರು ಕೊಲೆಯ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದುದರಿಂದ ಈ ಸಾವಿನ ಪ್ರಕರಣದ ಸಮಗ್ರವಾದ ತನಿಖೆ ಮಾಡಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಒತ್ತಾಯಿಸಿದೆ.
ನಿಯೋಗದಲ್ಲಿ ಜಿಲ್ಲಾಧ್ಯಕ್ಷೆ ಜಯಂತಿ ಬಿ.ಶೆಟ್ಟಿ, ಕಾರ್ಯದರ್ಶಿ ರಾಧಾ, ಮುಖಂಡ ಕಿರಣಾ ಪ್ರಭಾ, ಪದ್ಮಾವತಿ ಶೆಟ್ಟಿ, ಭಾರತಿ ಬೋಳರ್, ಪುಷ್ಪಾ ಕಾಟಿಪಳ್ಳ ಲಾಸಿನಿ ಮೊದಲಾದವರು ಉಪಸ್ಥಿತರಿದ್ದರು.
Next Story





