ವಿಕಲಚೇತನರ ಕುಂದುಕೊರತೆಗಳ ಅಹವಾಲು ಸಭೆ
ಮಂಗಳೂರು ಆ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ಕುಂದುಕೊರತೆಗಳ ಅಹವಾಲು ಸಭೆಯನ್ನು ಪ್ರತೀ ತಿಂಗಳ 3ನೆ ಸೋಮವಾರದಂದು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಅದರಂತೆ ವಿಕಲಚೇತನರು ತಮ್ಮ ಅಹವಾಲುಗಳು ಇದ್ದಲ್ಲಿ ಪ್ರತೀ ತಿಂಗಳ 7ನೆ ತಾರೀಕಿನೊಳಗೆ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇಲ್ಲಿಗೆ ಸಲ್ಲಿಸಬೇಕಾಗಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 0824-2458173, 2455999 ಸಂಪರ್ಕಿಸಲು ಕೋರಲಾಗಿದೆ.
Next Story





