ಹೆಣ್ಣು ಮಕ್ಕಳಿಬ್ಬರಿಗೆ ವಿಷ ಕೊಟ್ಟು ತಂದೆ ಆತ್ಮಹತ್ಯೆ
ಬೆಂಗಳೂರು, ಆ.2: ವ್ಯಕ್ತಿಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಚಳ್ಳಕೆರೆಯಲ್ಲಿ ವಾಸವಾಗಿದ್ದ ಹರೀಶ್ ಎಂಬುವರು ತನ್ನ ನಾಲ್ಕು ಮತ್ತು ಐದು ವರ್ಷದ ಹೆಣ್ಣು ಮಕ್ಕಳಿಬ್ಬರಿಗೆ ವಿಷ ಕುಡಿಸಿ ಕೊಲೆ ಮಾಡಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದಿಬಂದಿದೆ.
ಮಕ್ಕಳ ಕೊಲೆ ಹಾಗೂ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಹೆಣ್ಣೂರು ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Next Story





