Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಯಾಣಿಕರ ಸುರಕ್ಷತೆ ಕಾಪಾಡುವುದು ಚಾಲಕರ...

ಪ್ರಯಾಣಿಕರ ಸುರಕ್ಷತೆ ಕಾಪಾಡುವುದು ಚಾಲಕರ ಕರ್ತವ್ಯ: ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ2 Aug 2017 7:16 PM IST
share

ಬೆಂಗಳೂರು, ಆ.2: ಪ್ರಯಾಣಿಕರ ಸುರಕ್ಷತೆ ಹಾಗೂ ಸುಖಕರ ಪ್ರಯಾಣಕ್ಕೆ ಟ್ಯಾಕ್ಸಿ ಚಾಲಕರು ಆದ್ಯತೆ ನೀಡಬೇಕು ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಬೆಂಗಳೂರು ಟ್ಯಾಕ್ಸಿ ಅಸೋಸಿಯೇಷನ್ ಗ್ರೂಪ್ ವತಿಯಿಂದ ಆಯೋಜಿಸಿದ್ದ ಬಿಟ್ಯಾಗ್ ಕರುನಾಡ ಟ್ಯಾಕ್ಸಿ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಆಟೋ ಮತ್ತು ಟ್ಯಾಕ್ಸಿ ಚಾಲಕರು ಶ್ರಮ ಜೀವಿಗಳಾಗಿದ್ದು, ದಿನದ 24 ಗಂಟೆಗಳ ಕಾಲ ದುಡಿಯುತ್ತಾರೆ. ಚಾಲಕರು ಪ್ರಾಮಾಣಿಕತೆಯಿಂದ ಬದುಕಿದಾಗ ಜನರು ನಿಮ್ಮನ್ನು ಗೌರವಿಸುತ್ತಾರೆ. ಸಾರ್ವಜನಿಕರು ಪ್ರಾಮಾಣಿಕತೆಯಿಂದ ದುಡಿಯುವ ನೌಕರರನ್ನು ಗೌರವದಿಂದ ಕಾಣಬೇಕು. ಕೆಲವರು ಮಾಡುವ ತಪ್ಪುಗಳಿಗೆ ಎಲ್ಲರನ್ನೂ ದೂಷಿಸುವುದು ಸರಿಯಲ್ಲ ಎಂದರು.

ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ವಾಹನ ಅಪಘಾತ ಸಂಭವಿಸುವುದು ಸಾಮಾನ್ಯವಾಗಿದೆ. ಹೀಗಾಗಿ ಚಾಲಕರು ವಾಹನ ಚಾಲನೆ ಮಾಡುವಾಗ ಜಾಗೃತೆಯಿಂದ, ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕಾಗಿದೆ. ರಸ್ತೆ ಸುರಕ್ಷಾ, ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದಂತೆ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ಬಿಟ್ಯಾಗ್ ಆಡಳಿತ ವಿಭಾಗದ ಮುಖ್ಯಸ್ಥ ಬಸವರಾಜು ನಾಗೇನಹಳ್ಳಿ, ಈ ಆ್ಯಪ್‌ನಲ್ಲಿ ಗ್ರಾಹಕರ ಸುರಕ್ಷಣೆ ಮತ್ತು ಸುಖಕರ ಪ್ರಯಾಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಸರಳ ಬುಕ್ಕಿಂಗ್, ಚಾಲಕರಿಂದ ನೇರ ಸೇವೆ, ಪಾರದರ್ಶಕ ಶುಲ್ಕ ಪಾವತಿ, ತುರ್ತು ಪರಿಸ್ಥಿತಿಯಲ್ಲಿ ಭದ್ರತಾ ಸೇವೆ ಮತ್ತು ಬೆಂಬಲ ಒದಗಿಸುವುದು ಈ ಆ್ಯಪ್‌ನ ವಿಶೇಷ. ಪ್ರಾಥಮಿಕ ಹಂತದಲ್ಲಿ ಬೆಂಗಳೂರು ಮತ್ತು ಮೈಸೂರಿಗೆ ಈ ಆ್ಯಪ್‌ನ ಸೇವೆಗಳು ಲಭ್ಯವಾಗಲಿವೆ ಎಂದು ಹೇಳಿದರು.
ಆ್ಯಪ್‌ನಲ್ಲಿ ಚಾಲಕರಿಗೆ ಆರು ತಿಂಗಳ ಕಮಿಷನ್ ರಹಿತ ಸೇವೆ ಒದಗಿಸಲಾಗಿದೆ. ಚಾಲಕರು, ಅವರ ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ವಿಮೆ, ಅಪಘಾತ ವಿಮೆ ಸೌಲಭ್ಯ, ಸಹಾಯವಾಣಿ ಕಚೇರಿ, ಚಾಲಕರು ಮತ್ತು ಗ್ರಾಹಕರಿಗೆ ಖಾಸಗಿ ಪಹರಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆ.ಸಿ.ಚಂಗಲರಾಯರೆಡ್ಡಿ ಮೊಮ್ಮಗಳು ಕತಾ ವಾಸಂತಿ, ಸತೀಶ್, ಆದರ್ಶ, ಆಂತೋನಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X