ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ : ಸವಾರರಿಗೆ ಗಾಯ
ಮುಂಡಗೋಡ( ಯಲ್ಲಾಪುರ),ಆ.02 : ದ್ವಿಚಕ್ರವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಗಾಯಗೊಂಡ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ತಟಗಾರ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ವಿಶ್ವನಾಥ ಅನಂತ ಮಹೇಕರ(35) ಮತ್ತು ಹನುಮಂತ ಹರಟೇಕರ್(20) ಎಂದು ತಿಳಿದುಬಂದಿದೆ.
ಗಾಯಗೊಂಡ ಬೈಕ್ ಸವಾರ ವಿಶ್ವನಾಥ ಮಹೇಕರ ತೀವ್ರಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾದರೆ ಸ್ಕೂಟಿ ಸವಾರ ಹನುಮಂತ ಹರಟೇಕರ ಸ್ಥಳಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





