Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ : 'ಆಟಿದ ಗಮ್ಮತ್ತ್' ಕಾರ್ಯಕ್ರಮ

ಬಂಟ್ವಾಳ : 'ಆಟಿದ ಗಮ್ಮತ್ತ್' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ2 Aug 2017 8:04 PM IST
share
ಬಂಟ್ವಾಳ : ಆಟಿದ ಗಮ್ಮತ್ತ್ ಕಾರ್ಯಕ್ರಮ

ಬಂಟ್ವಾಳ,ಆ.02: ಶಿಕ್ಷಣ ಇಲಾಖೆ , ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಗೂಡಿನ ಬಳಿಯ ಬಿಆರ್‍ಸಿ ಕಚೇರಿ ಆವರಣದಲ್ಲಿ ಆಟಿದ ಗಮ್ಮತ್ತ್ ಕಾರ್ಯಕ್ರಮವು ಬುಧವಾರ ನಡೆಯಿತು.

ಇದೇ ವೇಳೆ ಸ್ನೇಕ್ ಪಾಪು ಹಾಗೂ ಸ್ನೇಕ್ ಜೋಯ್ ಅವರು ಕಾರ್ಯಕ್ರಮದ ಅಂಗವಾಗಿ ನಡೆಸಿಕೊಟ್ಟ ಉರಗ ಮಾಹಿತಿ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಮೂಡಿಬಂತು.

ಮಾಹಿತಿ ನೀಡಿದ ಸ್ನೇಕ್ ಜೋಯ್ ರವರು, ಯಾರ ಕೈಯಲ್ಲೂ ಗರುಡರೇಖೆಗಳಿರುವುದಿಲ್ಲ, ಕೈಯ ರೇಖೆ ಗಮನಿಸುವಷ್ಟು ಹಾವುಗಳಿಗೆ ದೃಷ್ಟಿಯೂ ಸೂಕ್ಷ್ಮವಾಗಿರುವುದಿಲ್ಲ.

ನಾಗಮಣಿ ಎಂಬುದೂ ಕೂಡ ಸುಳ್ಳು ಎಂದು ಮನದಟ್ಟು ಮಾಡಿದರು.

ವಿವಿಧ ಹಾವುಗಳ ರೂಪ, ಅವುಗಳ ವರ್ತನೆ, ವಿಷದ ಸ್ವರೂಪ, ಅಹಾರ ಪದ್ಧತಿ ಹೀಗೆ ವಿವಿಧ ಬಗೆಯ ಹಾವುಗಳ ಬಗ್ಗೆ ಮಾಹಿತಿ ನೀಡಿದರು.  ಹಾವಿನಿಂದ ಕಡಿತಕ್ಕೆ ಒಳಗಾದರೆ ಮಾಡಬೇಕಾದ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.  ಸ್ನೇಕ್ ಪಾಪು ರವರು, ನಾಗರಹಾವು, ಕೇರೆ, ಹೆಬ್ಬಾವು ಮರಿ ಹಾವುಗಳನ್ನುಪ್ತದರ್ಶಿಸಿ, ಅವುಗಳಿಗೆ ಉಪಟಳ ಮಾಡದಿದ್ರೆ ಅವೇನೂ ಮಾಡುವುದಿಲ್ಲ. ನಾಯಿ, ಬೆಕ್ಕುಗಳನ್ನು ಪ್ರೀತಿಸಿದಂತೆ ಹಾವುಗಳನ್ನೂ ನಾವು ಪ್ರೀತಿಸಬಹುದು. ವಿಷಪೂರಿತ ಹಾವುಗಳೆಂದು ತಪ್ಪು ನಂಬಿಕೆಯಿಂದ ವಿಷ ರಹಿತ ಹಾವುಗಳನ್ನೂ ಕೊಲ್ಲುತ್ತಿದ್ದೇವೆ. ಅವುಗಳ ಬಗ್ಗೆ ಅರಿವು ಅಗತ್ಯ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್,  ಡಯಟ್ ಪ್ರಿನ್ಸಿಪಾಲ್  ಸಿಫ್ರಿಯನ್ ಮೊಂತೆರೋ, ಸರ್ವಶಿಕ್ಷಣ ಅಭಿಯಾನದ ಉಪಯೋಜನಾಧಿಕಾರಿ ಗೀತಾ, ಡಯಟ್ ಉಪನ್ಯಾಸಕರು, ಶಿಕ್ಷಣ ಸಂಯೋಜಕರು, ಸಿಆರ್ ಪಿ, ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೆಳಿಗ್ಗೆ ಶಿಕ್ಷಕ ವಿಠಲ್ ನಾಯಕ್ ರವರಿಂದ ಪಾಡ್ದನಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಅಪರಾಹ್ನ ಆಟಿದ ಗಮ್ಮತ್ ಕಾರ್ಯಕ್ರಮದ ಅಂಗವಾಗಿ 51 ಬಗೆಯ ಪೌಷ್ಠಿಕ ಆಹಾರಗಳ ಪ್ರದರ್ಶನ ನಡೆಯಿತು. ಬಳಿಕ ಕಾವ್ಯಶ್ರೀ ಅಜೇರು ಹಾಗೂ ಉಪನ್ಯಾಸಕ ಪ್ರಶಾಂತ್ ರವರು ಯಕ್ಷ ಗಾನ ವೈಭವವನ್ನು ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X