ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಪರಮೇಶ್ವರ್ ನಿರ್ಧಾರ

ಬೆಂಗಳೂರು, ಆ. 2: ರಾಜ್ಯದಲ್ಲಿನ ಭೀಕರ ಸ್ವರೂಪದ ಬರ ಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬಡ ಕೂಲಿ ಕಾರ್ಮಿಕರು ಕಷ್ಟದಲ್ಲಿ ಬದುಕು ನಡೆಸುವ ದಾರುಣ ಪರಿಸ್ಥಿತಿ ಇದೆ. ಆದುದರಿಂದ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಿರ್ಧರಿಸಿದ್ದಾರೆ.
ಯಾರೂ ಕೂಡ ಯಾವುದೇ ಕಾರಣಕ್ಕೂ ಆ.6ರಂದು ಪತ್ರಿಕೆ-ಮಾಧ್ಯಮಗಳಲ್ಲಿ ಜಾಹೀರಾತು ಹಾಕುವುದು, ಭಿತ್ತಿಪತ್ರ ಅಂಟಿಸುವುದು, ಸಂಭ್ರಮಾಚರಣೆ ಮಾಡಬಾರದು ಎಂದು ಡಾ.ಜಿ.ಪರಮೇಶ್ವರ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸೂಚಿಸಿದ್ದಾರೆ.
Next Story





